ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಕಂಚಿನ ಪದಕದ ಮೂಲಕ ಶುಭಾರಂಭ ಮಾಡಿದೆ. ಶೂಟಿಂಗ್‌ನಲ್ಲಿ ಮನು ಭಾಕರ್ ಕಂಚಿನ ಪದಕ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಇದಕ್ಕೆ ಪ್ರಧಾನಿ, ರಾಷ್ಟ್ರಪತಿ ಸೇರಿದಂತೆ ಗಣ್ಯರ ಶುಭಾಷಯಗಳ ಮಹಾಪೂರವೇ ಹರಿದುಬಂದಿದೆ.
22 ವಯಸ್ಸಿನ ಮನು ಭಾಕರ್ ಮೂಲಕ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪದಕದ ಖಾತೆ ತೆರೆದಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.
ಉಳಿದಂತೆ ಕೊರಿಯಾ ಚಿನ್ನ ಹಾಗೂ ಬೆಳ್ಳಿ ಪದಕಗಳೆರಡನ್ನೂ ಗೆದ್ದಿದೆ. ಕಳೆದ 2020 ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮನು ಭಾಕರ್ ತಮ್ಮ ಪಿಸ್ತೂಲಿನಲ್ಲಿ ಕಂಡು ಬಂದ ದೋಷದಿಂದಾಗಿ ಪದಕದ ರೇಸ್ನಿಂದ ಹೊರಬಿದ್ದಿದ್ದರು. ಈ ಬಾರಿ ಒಲಿಂಪಿಕ್ಸ್‌ನಲ್ಲಿ ಮೊದಲ ಪದಕ ಗೆದ್ದಿದ್ದಾರೆ.