ದೇವಸ್ಥಾನದ ಗೋಡೆ ಕುಸಿದು 9 ಮಕ್ಕಳು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಇಂದು ನಡೆದಿದೆ.
ಶಹಪುರದ ಹರ್ದುಲ್ ಬಾಬಾ ಟೆಂಪಲ್ನಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ದುರ್ಘಟನೆ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಹಾಗೂ ಸ್ಥಳೀಯರು ಮಕ್ಕಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೃತರೆಲ್ಲ 10 ರಿಂದ 15 ವರ್ಷದೊಳಗಿನ ಮಕ್ಕಳು, ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯಿಂದ ದೇವಾಲಯದ ಗೋಡೆ ನೀರಲ್ಲಿ ನೆನೆದು ನಿಂತಿತ್ತು.