ತಾನೇ ಸಾಕಿದ ಮುದ್ದಿನ ಮೊಲವೊಂದು ಕಚ್ಚಿದ ಪರಿಣಾಮವಾಗಿ ಮಹಿಳೆಯೊಬ್ಬರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಕೇರಳದ ಅಲಪುಳದ ತಕಾಝೀಯದಲ್ಲಿ ಈ ಘಟನೆ ನಡೆದಿದ್ದು, ೬೩ ವರ್ಷದ ಶಾಂತಮ್ಮ ಎಂಬವರು ಕೊನೆಯುಸಿರೆಳೆದಿದ್ದಾರೆ.
ಅ.೨೧ರಂದು ಶಾಂತಮ್ಮಗೆ ಮೊಲ ಕಚ್ಚಿತ್ತು. ಈ ಹಿನ್ನೆಲೆಯಲ್ಲಿ ಅಲಪ್ಪುಳ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮುಂಜಾಗೃತ ಕ್ರಮವಾಗಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳುತ್ತಿದ್ದರು. ಮೂರನೇ ಡೋಸ್ ಹಾಕಿದ ನಂತರ ಅವರು ಕುಸಿದು ಬಿದ್ದಿದ್ದಾರೆ. ನಂತರ ಅವರನ್ನು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಪ್ರಕರಣ ದಾಖಲಿಸಿಕೊಂದು ಪೊಲೀಸರು ತನಿಖೆ ಆರಂಭಿಸಿದ್ದಾರೆ