ಬೆಂಗಳೂರು: ಕರ್ನಾಟಕಕ್ಕೆ ನೀಡುವ ಸಾಲದ ಮಿತಿ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್ ಬ್ಯಾಂಕ್ನಿಂದ ನೀಡುವ ಸಾಲದ ಮಿತಿಯನ್ನು ಹೆಚ್ಚಳ ಮಾಡುವಂತೆ ವಿನಂತಿಸಿದ್ದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಮುಂದೆಯೇ ಎಲ್ಲ ರಾಜ್ಯಗಳ ಸಾಲದ ಮೊತ್ತವನ್ನು ಕಡಿತ ಮಾಡಲಾಗಿದೆ. ಅದರಂತೆ ಕರ್ನಾಟಕದ್ದು ಕಡಿತ ಮಾಡಲಾಗಿದೆ. ಹೀಗಾಗಿ ನಿಮಗಾಗಿ ಪ್ರತ್ಯೇಕ ನೀತಿ ರೂಪಿಸಲು ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿರುವುದಾಗಿ ವರದಿಯಾಗಿದೆ