ರಾಮನಗರ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈ ಪೈಕಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಭಾರೀ ಮುನ್ನಡೆ ಸಾಧಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ 23,210 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರ್ಸ್ವಾಮಿ ಅವರು ಹಿನ್ನಡೆ ಅನುಭವಿಸಿದ್ದಾರೆ. 2024ರ ಉಪಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರ ಸಾಕಷ್ಟು ಸದ್ದು ಮಾಡಿತ್ತು. ಹೀಗಾಗಿ ಈ ಕ್ಷೇತ್ರದಲ್ಲಿ ಯಾರು ಗೆಲ್ಲುತ್ತಾರೆ ಎಂದು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಅಂಚೆ ಮತದಾನದಲ್ಲಿ ಸಿ.ಪಿ ಯೋಗೇಶ್ವರ್, ನಿಖಿಲ್ ಕುಮಾರಸ್ವಾಮಿ ಇಬ್ಬರೂ ಸಮಬಲ ಕಾಯ್ದುಕೊಂಡಿದ್ದರು. 3-4 ಸುತ್ತಿನಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮುನ್ನಡೆ ಸಾಧಿಸುತ್ತಾ ಬಂದಿದ್ದರು. ಆದರೆ 11ನೇ ಸುತ್ತಿಗೆ ಬರುವಷ್ಟರಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.