ಕರ್ನಾಟಕ ವಿಧಾನಸಭಾ ಉಪಚುನಾವಣೆಯಲ್ಲಿ ಹೈ ವೊಲ್ಟೇಜ್ ಕ್ಷೇತ್ರವೆಂದೇ ಪರಿಗಣಿಸಲ್ಪಟ್ಟಿದ್ದ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಹೀನಾಯವಾಗಿ ಸೋತಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಮೊದಲ 6 ಸುತ್ತಿನಲ್ಲಿ ನಿಖಿಲ್ ಮುನ್ನಡೆಯಲ್ಲಿದ್ದರು. ಆದರೆ ಚನ್ನಪಟ್ಟಣ ನಗರದ ಇವಿಎಂ (EVM) ಓಪನ್ ಆಗುತ್ತಿದ್ದಂತೆ ಯೋಗೇಶ್ವರ್ ಅವರಿಗೆ ಭರ್ಜರಿ ಮುನ್ನಡೆ ಸಿಕ್ಕಿತ್ತು. ಈ ಮುನ್ನಡೆಯನ್ನು ಯೋಗೇಶ್ವರ್ ಕೊನೆಯವರೆಗೂ ಉಳಿಸಿಕೊಂಡು ಬಂದಿದ್ದರು.
ಯೋಗೇಶ್ವರ್‌ಗೆ 2 ಬಾರಿ ಸೋಲಿನ ಅನುಕಂಪ ಕೈ ಹಿಡಿದಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸೋಲಿನ ನಂತರ ಡಿಕೆ ಬ್ರದರ್ಸ್ ಚನ್ನಪಟ್ಟಣವನ್ನು ಪ್ರತಿಷ್ಠೆಯಾಗಿ ತಗೆದುಕೊಂಡಿದ್ದರು. ಇನ್ನೊಂದೆಡೆ ಸಚಿವ ಝಮೀರ್ ಹೇಳಿಕೆಯಿಂದ ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ ಎನ್ನಲಾಗಿತ್ತು. ಆದರೆ ಝಮೀರ್ 20 ಸಾವಿರ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಅದರಂತೆ, ಯೋಗೇಶ್ವರ್ ಭರ್ಜರಿ ಮತಗಳ ಅಂತರದಿಂದ ಗೆದ್ದಿದ್ದಾರೆ.