ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆಯ ಫಲಿತಾಂಶ ಪ್ರಕಟವಾಗಿದೆ. ಶಿಗ್ಗಾಂವಿ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ನ ಯಾಸಿರ್ ಅಹಮದ್ ಖಾನ್ ಪಠಾಣ್ ಗೆಲುವು ಸಾಧಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಮಗ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಸೋಲಾಗಿದೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಇಡೀ ದೇಶದ ಗಮನ ಸೆಳೆದಿತ್ತು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದೆ. ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಅವರಿಗೆ ಇದು ಮೂರನೇ ಸೋಲಾಗಿದೆ.
ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರ ವಿರುದ್ಧ ವಿಜಯಶಾಲಿಯಾಗಿದ್ದಾರೆ.