ಇದೀಗ ಬಂದ ಸುದ್ದಿ
Sat. Dec 21st, 2024

ದೆಹಲಿ (07-11-2023): ದೀಪಾವಳಿ ಸಮೀಪಿಸುತ್ತಿದ್ದಂತೆ ಹಲವು ಮಹತ್ವದ ಬೆಳವಣಿಗೆಗೆ ದೇಶ ಸಾಕ್ಷಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನ ನಿರ್ದೇಶನ ಅತ್ಯಂತ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.‌ ಪಟಾಕಿಗಳಲ್ಲಿ ಬೇರಿಯಂ ಮತ್ತು ನಿಷೇಧಿತ ರಾಸಾಯನಿಕಗಳ ಬಳಕೆಯ ಬಗ್ಗೆ ತನ್ನ ಹಿಂದಿನ ನಿರ್ದೇಶನಗಳು ರಾಜಧಾನಿ ದೆಹಲಿ ಮಾತ್ರವಲ್ಲದೆ ಎಲ್ಲಾ ರಾಜ್ಯಗಳಿಗೂ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಹಬ್ಬದ ಸಮಯದಲ್ಲಿ ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್‌ನ ಆದೇಶ ಪಾಲಿಸಲು ರಾಜಸ್ಥಾನ ರಾಜ್ಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಈ ಸ್ಪಷ್ಟನೆ ನೀಡಿದೆ. ಈ ಸಂಬಂಧ ಯಾವುದೇ ಹೊಸ ನಿರ್ದೇಶನಗಳ ಅಗತ್ಯವಿಲ್ಲ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಹಿಂದಿನ ಆದೇಶಗಳನ್ನು ಪಾಲಿಸುವಂತೆ ರಾಜಸ್ಥಾನ ರಾಜ್ಯಕ್ಕೆ ನಿರ್ದೇಶಿಸಿತು ಮತ್ತು ಅದರ ಆದೇಶಗಳು ಎಲ್ಲಾ ರಾಜ್ಯಗಳಿಗೆ ಅನ್ವಯಿಸುತ್ತದೆ ಎಂದು ಪುನರುಚ್ಚರಿಸಿತು.

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ವಾಯು ಮಾಲಿನ್ಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ವಿವಿಧ ರಾಜ್ಯಗಳು ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣ ಮಾಡಬೇಕಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನ ಹೇಳಿಕೆ ಮಹತ್ವ ಪಡೆದುಕೊಂಡಿದೆ.‌

Related Post

Leave a Reply

Your email address will not be published. Required fields are marked *