Friday, December 4 , 2020
ರಾಜಕೀಯಕ್ಕೆ ಅಡ್ಡಿ ಆಗುತ್ತದೆ ಎಂದು ತನ್ನ ಸ್ವಂತ ಮಗುವನ್ನೇ ಕೊಂದ ಕ್ರೂರಿ ತಂದೆ

ದಾವಣಗೆರೆ (15.10.2020) : ರಾಜಕೀಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ತನ್ನ ಸ್ವಂತ ಮಗುವನ್ನೇ ಹತ್ಯೆ ಮಾಡಿದ ದಾರುಣ ಘಟನೆ ನಗರದಲ್ಲಿ ನಡೆದಿದೆ.

ಜಗಳೂರು ತಾಲೂಕಿನ ಗುತ್ತಿದುರ್ಗ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಎರಡನೇ ಪತ್ನಿಯ ತನ್ನ ಸ್ವಂತ ಮಗುವನ್ನು ತಂದೆಯೇ ಕೊಂದು ಹಾಕಿ ಹೂತು ಹಾಕಿದ್ದಾನೆ. ಸಂಬಂಧದಲ್ಲಿ ಸಹೋದರಿ‌ ಆಗಿದ್ದವಳನ್ನೇ 2ನೇ ಮದುವೆ ಆಗಿದ್ದ ಎಂಬುವ ವಿಚಾರ ತನಿಖೆಯಲ್ಲಿ ಬಹಿರಂಗ ಆಗಿದೆ.



ನಿಂಗಪ್ಪ ಈ ಕೃತ್ಯ ಎಸಗಿದವ. ಈತ ಸಣ್ಣಪುಟ್ಟ ಗುತ್ತಿಗೆ ಕೆಲಸಗಳನ್ನು‌ ಗ್ರಾಮದಲ್ಲಿ ಮಾಡಿಸುತ್ತಿದ್ದ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದ. ಆದರೆ, ಎರಡನೇ ಪತ್ನಿ ತಮ್ಮ ಮದುವೆ ವಿಚಾರ ಎಲ್ಲರಿಗೂ ತಿಳಿಸಬೇಕೆಂಬ ಒತ್ತಡ ಹೇರುತ್ತಿದ್ದಳು. ಈ ವಿಚಾರ ಗೊತ್ತಾದರೆ ಮರ್ಯಾದೆ ಸಿಗಲ್ಲ ಎಂಬ ಕಾರಣಕ್ಕೆ ಎರಡು ವರ್ಷ ಎಂಟು ತಿಂಗಳ ಶಿರಿಷಾಳ ಬಾಯಿಗೆ ಬಟ್ಟೆ ತುರುಕಿ ಕತ್ತು ಹಿಸುಕಿ ಕೊಲೆ‌ ಮಾಡಿ ತನ್ನ ಜಮೀನಿನಲ್ಲಿ‌ ಹೂತು‌ ಹಾಕಿದ್ದಾನೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]