Friday, April 16 , 2021
ಮನೆ ಬಿಟ್ಟು ಓಡಿಹೋಗೋಣ ಎಂದಿದ್ದಕ್ಕೆ ನಿರಾಕರಣೆ: ಪ್ರೇಯಸಿಗೆ ಚೂರಿ ಇರಿತ

ಬೆಳ್ತಂಗಡಿ (08.04.2021) : ಪ್ರೇಮ ಪ್ರಕರಣದ ವಿಚಾರಕ್ಕೆ ಯುವಕನೋರ್ವ ಪ್ರೇಯಸಿಯನ್ನು ಮನೆ ಬಿಟ್ಟು ಬರುವಂತೆ ಒತ್ತಾಯಿಸಿದಾಗ ಯುವತಿ ತಿರಸ್ಕರಿಸಿದ ಕಾರಣ ಕುಪಿತಗೊಂಡ ಯುವಕ, ಯುವತಿಯ ಮನೆಗೆ ನುಗ್ಗಿ ಚೂರಿಯಿಂದ ಇರಿದ ಘಟನೆ ರಾತ್ರಿ ಲಾೖಲ ಸಮೀಪ ಜರುಗಿದೆ.

ಬೆಳ್ತಂಗಡಿ ತಾಲೂಕು ಲಾೖಲ ಗ್ರಾಮದ 21 ವರ್ಷದ ಯುವತಿ ಇರಿತಕ್ಕೆ ಒಳಗಾದವರು. ಪೂಂಜಾಲಕಟ್ಟೆ ನಿವಾಸಿ ಶಮೀರ್‌ (22) ಚೂರಿ ಇರಿದ ಯುವಕ.

ಶಮೀರ್‌ ಈ ಯುವತಿಯನ್ನು ಸುಮಾರು 5 ವರ್ಷಗಳಿಂದ ಪ್ರೀತಿ ಸುತ್ತಿದ್ದ ಎನ್ನಲಾಗಿದೆ. ಮದುವೆಯಾಗಲು ಮನೆ ಬಿಟ್ಟು ಬರಲು ಒತ್ತಾಯಿಸುತ್ತಿದ್ದ. ಅದನ್ನು ಆಕೆ ತಿರಸ್ಕರಿಸಿದ್ದರಿಂದ ಕೋಪಗೊಂಡ ಪ್ರೇಮಿ ಮಂಗಳವಾರ ರಾತ್ರಿ 10.20ಕ್ಕೆ ಯುವತಿ ಮನೆಗೆ ನುಗ್ಗಿ ಆಕೆಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದುಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]