
ಬೆಂಗಳೂರು(07.01.2021): ಚಲನಚಿತ್ರ ಕಾರ್ಮಿಕ ಒಕ್ಕೂಟ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ನಟ ಅಶೋಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕನ್ನಡ ಚಲನಚಿತ್ರ ಕಾರ್ಮಿಕರ ಒಕ್ಕೂಟದ ಸ್ಥಾಪಕ ಅಧ್ಯಕ್ಷನಾಗಿ, ನಿಮ್ಮೆಲ್ಲರ ಸಹಕಾರ ಪ್ರೋತ್ಸಾಹದಿಂದ ಸುದೀರ್ಘ ಸಮಯದಿಂದ ಸೇವೆ ಸಲ್ಲಿಸಿದ್ದೇನೆ. ಇದೀಗ ವೈಯಕ್ತಿಕ ಕಾರಣಗಳಿಂದ ಅಧ್ಯಕ್ಷನಾಗಿ ಮುಂದುವರಿಯಲು ಸಾಧ್ಯವಾಗುತ್ತಿಲ್ಲ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕೆಂದು ಕೋರುತ್ತೇನೆ. ನಿಮ್ಮೆಲ್ಲರ ಸ್ನೇಹ ಸೌಹಾರ್ದಗಳನ್ನು ಸದಾ ಕಾಲ ನೆನಯುತ್ತೇನೆ. ವಂದನೆಗಳು’ ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಸಾ.ರಾ ಗೋವಿಂದ್ ನೇತೃತ್ವದಲ್ಲಿ ನಾಡಿದ್ದು ಚುನಾವಣೆ ಬಗ್ಗೆ ಸಭೆ ನಡೆಯಲಿದೆ. ಅಶೋಕ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇನ್ನು ಮೂರು ತಿಂಗಳಲ್ಲಿ ಚುನಾವಣೆ ನಡೆಯೋ ಸಾಧ್ಯತೆಗಳಿದೆ ಎಂದು ತಿಳಿದುಬಂದಿದೆ.