Sunday, September 19 , 2021
ಚಪ್ಪಲಿ ಹಾಕಿಕೊಂಡು ದೇವಾಲಯದಲ್ಲಿ ಓಡಾಟ: ಬಂಧನದ ಭೀತಿಯಲ್ಲಿ ನಟಿ ತ್ರಿಷಾ​

ಕಾಲಿವುಡ್‌ನ ಖ್ಯಾತ ನಟಿ ತ್ರಿಷಾ ಕೃಷ್ಣನ್​ಗೆ ಇದೀಗ ಸಂಕಷ್ಟ ಎದುರಾಗಿದ್ದು, ಅವರು ಬಂಧನದ ಭೀತಿಯಲ್ಲಿದ್ದಾರೆ. ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾದ ಚಿತ್ರೀಕರಣದ ವೇಳೆ ನಟಿ ಯಡವಟ್ಟು ಮಾಡಿಕೊಂಡಿದ್ದಾರೆ. ಇಂಧೋರ್‌ನ ಶಿವ ದೇವಾಲಯದಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆದಿದ್ದು, ಈ ಸಂದರ್ಭದಲ್ಲಿ ಅವರು ಚಪ್ಪಲಿ ಹಾಕಿಕೊಂಡು ದೇವಾಲಯದಲ್ಲಿ ಓಡಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ದೇವಾಲಯದ ಗರ್ಭಗುಡಿ, ಮುಂಭಾಗ ಚಪ್ಪಲಿ ಧರಿಸಿ ಶಿವಲಿಂಗ ಹಾಗೂ ನಂದಿಯ ಮಧ್ಯೆ ನಡೆದಾಡಿದ್ದಾರೆ. ಈ ಚಿತ್ರಗಳಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ದೇವಸ್ಥಾನದಲ್ಲಿ ಚಪ್ಪಲಿ ಧರಿಸಿ ಓಡಾಡಿದ ನಟಿ ತ್ರಿಷಾ ಕೃಷ್ಣನ್ ಅವರನ್ನು ಬಂಧಿಸುವಂತೆ ಹಿಂದೂ ಪರ ಸಂಘಟನೆಗಳು ಆಗ್ರಹಿಸುತ್ತಿವೆ. ತಮಿಳುನಾಡಿನ ಹಿಂದೂ ಸಂಘಟನೆಗಳಂತೂ ತ್ರಿಷಾ ಮತ್ತು ಮಣಿರತ್ನಂ ಇಬ್ಬರನ್ನೂ ಬಂಧಿಸುವಂತೆ ಒತ್ತಾಯ ಮಾಡುತ್ತಿವೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]