Friday, October 16 , 2020
ಅಕುಲ್ ಬಾಲಾಜಿ ರೆಸಾರ್ಟ್ ನಲ್ಲಿ ನಡೆಯುತ್ತಿತ್ತಾ ಮತ್ತಿನ ದಂಧೆ | ಸ್ಟಾರ್ ನಟರ ಮೋಜು ಮಸ್ತಿಯ ಪಾರ್ಟಿಯಲ್ಲಿ ಡ್ರಗ್ಸ್ ನದ್ದೇ ಕಾರುಬಾರು!
Drugs Mafia

ಬೆಂಗಳೂರು(19.09.2020):  ನಟ, ನಿರೂಪಕ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ರೆಸಾರ್ಟ್ ನಲ್ಲಿ ಡ್ರಗ್ಸ್ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಸ್ಟಾರ್ ನಟ, ನಟಿಯರು ಈ ಪಾರ್ಟಿಯಲ್ಲಿ ಪಾಲ್ಗೊಳ್ಳುತ್ತಿದ್ದರು ಎನ್ನುವ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭಿಸಿದೆ ಎಂದು ವರದಿಯಾಗಿದೆ.

ದೊಡ್ಡಬಳ್ಳಾಪುರ ಬಳಿಯ ತಮ್ಮ ಸನ್ ಶೈನ್ ರೆಸಾರ್ಟ್ ಈ ಮತ್ತಿನ ಪಾರ್ಟಿ ನಡೆಯುತ್ತಿತ್ತು. ಈ ಪಾರ್ಟಿಯಲ್ಲಿ ಅಗತ್ಯ ಇದ್ದವರಿಗೆ ರಾಹುಲ್ ಹಾಗೂ ವಿರೇನ್ ಖನ್ನಾರಿಂದ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು ಎನ್ನಲಾಗಿದೆ. ಈ ಮಾಹಿತಿ ಪೊಲೀಸರಿಗೆ ದೊರೆಯುತ್ತಿದ್ದಂತೆಯೇ ಅಕುಲ್ ಬಾಲಾಜಿ ಅವರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ.


ನಟ-ನಟಿಯರಿಗೆ ಹಾಗೂ ಅವರ ಪತ್ನಿಯರಿಗೆ ಜ್ಯೂಸ್ ನಲ್ಲಿ ಡ್ರಗ್ಸ್ ಬೆರೆಸಿ ನೀಡಲಾಗುತ್ತಿತ್ತು. ಒಂದು ಎಂಡಿಎಂ ಮಾತ್ರೆಯನ್ನು ನಾಲ್ಕು ಜನರಿಗೆ ಶೇರ್ ಮಾಡಿ ನೀಡಲಾಗುತ್ತಿತ್ತು ಎಂದು ವರದಿಯಾಗಿದೆ. ಪೇಜ್ 3 ಪಾರ್ಟಿಗಳನ್ನೂ ಇಲ್ಲಿ ಆಯೋಜಿಸಲಾಗುತ್ತಿತ್ತು,  ಕೊರೊನಾ ಟೈಮ್ ನಲ್ಲಿಯೂ ಇದೇ ರೆಸಾರ್ಟ್ ನಲ್ಲಿ ಭರ್ಜರಿ ಪಾರ್ಟಿ ಆಯೋಜಿಸಲಾಗಿತ್ತು ಎಂದು ದೊಡ್ಡಬಳ್ಳಾಪುರ ಠಾಣೆಗೆ ಸ್ಥಳೀಯರೊಬ್ಬರು ದೂರು ದಾಖಲಿಸಿದ್ದರು ಎನ್ನಲಾಗಿದೆ.


ಇನ್ನೂ ಈ ಪ್ರಕರಣ ಸಂಬಂಧ ಇಂದು ಸಿಸಿಬಿ ಪೊಲೀಸರ ವಿಚಾರಣೆಗೆ ಹಾಜರಾಗಿರುವ ಅಕುಲ್ ಬಾಲಾಜಿ,  ಡ್ರಗ್ಸ್​ ದಂಧೆಯ ಆರೋಪಿ ವೈಭವ್ ಜೈನ್ ಮತ್ತು ಪ್ರತಿಕ್ ಶೆಟ್ಟಿ ನನಗೆ ಹಾಯ್-ಬಾಯ್ ಫ್ರೆಂಡ್ ಅಷ್ಟೆ. ನನ್ನ ರೆಸಾರ್ಟ್ ಅನ್ನು ಲೀಜ್​ಗೆ ಕೊಟ್ಟಿದ್ದೆ. ಅದರ ದಾಖಲೆಗಳನ್ನು ತಂದಿದ್ದೇನೆ. ಎಲ್ಲ ಮಾಹಿತಿಯನ್ನೂ ತನಿಖಾಧಿಕಾರಿಗಳಿಗೆ ನೀಡುತ್ತೇನೆ. ಲಾಕ್​ಡೌನ್ ವೇಳೆ ಅಲ್ಲಿ ಏನು ನಡೆಯಿತು? ಎಂಬುದರ ಬಗ್ಗೆ ನನಗೆ ದೇವ್ರಾಣೆ ಗೊತ್ತಿಲ್ಲ ಎಂದು ಹೇಳಿದ್ದಾರೆ.


Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]