Friday, October 16 , 2020
ಡ್ರಗ್ಸ್ ಕೇಸ್ |  ನಟ, ನಿರೂಪಕ ಅಕುಲ್ ಬಾಲಾಜಿ ವಿರುದ್ಧ ನೋಟಿಸ್ ಜಾರಿ
akul balaji

ಬೆಂಗಳೂರು(18.09.2020): ಸ್ಯಾಂಡಲ್ ವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ನಟ ನಿರೂಪಕ ಅಕುಲ್ ಬಾಲಾಜಿ ಸೇರಿದಂತೆ ಮೂವರಿಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನಿರೂಪಣೆಯ ಮೂಲಕ ಬಹಳಷ್ಟು ಮೆಚ್ಚುಗೆ ಪಡೆದಿದ್ದು ಅಕುಲ್ ಬಾಲಾಜಿ ಇದೀಗ ಡ್ರಗ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಬೇಕಿದೆ.


ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈ ಕ್ರಮಕ್ಕೆ ಮುಂದಾಗಿದ್ದಾರೆ.  ಅಕುಲ್ ಬಾಲಾಜಿ, ಸಂತೋಷ್ ಕುಮಾರ್, ಆರ್.ವಿ.ಯುವರಾಜ್ ಅವರಿಗೆ ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಲ್ಲಿ ದಿನಕ್ಕೊಬ್ಬರ ಹೆಸರು ಹೊರಬರುತ್ತಿವೆ. ಮೇಲಿಂದ ಮೇಲೆ ನಟ, ನಟಿಯರಿಗೆ ನೋಟಿಸ್ ಗಳು ಜಾರಿಯಾಗುತ್ತಿವೆ.  ಈ ನಡುವೆಯೇ ಅಕುಲ್ ಬಾಲಾಜಿ ವಿರುದ್ಧವೂ ಡ್ರಗ್ಸ್ ಆರೋಪ ಕೇಳಿ ಬಂದಿದ್ದು, ವಿಚಾರಣೆಯ ಬಳಿಕ ಅಕುಲ್ ಬಾಲಾಜಿ  ಅವರು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆ ದೊರೆಯಲಿದೆ.


Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]