Friday, October 16 , 2020
ತಮಿಳಿನ ಖ್ಯಾತ ನಟ ಹೃದಯಾಘಾತದಿಂದ ನಿಧನ
balaji vadivel

ಚೆನ್ನೈ(10.09.2020): ತಮಿಳಿನ ಖ್ಯಾತ ನಟ ವಡಿವೇಲ್ ಬಾಲಾಜಿ ಅವರು ಗುರುವಾರ ನಿಧನರಾಗಿದ್ದು,  ತಮ್ಮ 45ನೇ ವಯಸ್ಸಿನಲ್ಲೇ ಅವರು ನಿಧನರಾಗಿರುವುದು ಇದೀಗ ಅಭಿಮಾನಿಗಳಲ್ಲಿ ತೀವ್ರ ನೋವನ್ನುಂಟು ಮಾಡಿದೆ.

ಬಾಲಾಜಿ ಅವರು ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೃದಯಾಘಾತಕ್ಕೆ ಒಳಗಾಗಿದ್ದ ಬಾಲಾಜಿ ಅವರನ್ನು ಎರಡು ವಾರಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆ ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ, ಚಿಕಿತ್ಸೆಯ ವೆಚ್ಚ ಭರಿಸಲು ಸಾಧ್ಯವಾಗದ ಕುಟುಂಬವು ಅವರನ್ನು ಚೆನ್ನೈನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿತ್ತು.

balaji vadivel

ವಡಿವೇಲು ಗೆಟಪ್ ನಲ್ಲಿ ಬಾಲಾಜಿ

 

ಲಾಕ್ ಡೌನ್ ಸಂದರ್ಭದಲ್ಲಿ ತೀವ್ರವಾಗಿ ಆರ್ಥಿಕ ಸಂಕಷ್ಟ ಅನುಭವಿಸಿದ್ದ ಅವರ ಕುಟುಂಬವು, ವಡಿವೇಲ್ ಅವರಿಗೆ ಚಿಕಿತ್ಸೆ ಒದಗಿಸಲು ತೀವ್ರವಾಗಿ ಪರದಾಡಿತ್ತು. ಆದರೆ ಕೊನೆಗೂ ಸರಿಯಾದ ಚಿಕಿತ್ಸೆ ದೊರೆಯದೇ ವಡಿವೇಲ್ ಬಾಲಾಜಿ ನಿಧನರಾಗಿದ್ದಾರೆ. ಬಾಲಾಜಿ ಅವರು ಪತ್ನಿ, ಒಬ್ಬ ಮಗ ಮತ್ತು ಮಗಳನ್ನು ಅಗಲಿದ್ದಾರೆ.

ವಡಿವೇಲ್ ಬಾಲಾಜಿ ಅವರು ಹಿರಿಯ ನಟ ವಡಿವೇಲು ಅವರ ಅನುಕರಣೆಯ ಮೂಲಕ ಹೆಸರುವಾಸಿಯಾಗಿದ್ದರು. ಹಾಗೆಯೇ ವಡಿವೇಲು ಎಂಬ ಹೆಸರನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]