Saturday, October 17 , 2020
ಕಂಗನಾ, ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್ಐಆರ್​ ದಾಖಲಿಸಲು ಕೋರ್ಟ್ ಆದೇಶ
kangana

ಮುಂಬೈ(17.10.2020): ಬಾಲಿವುಡ್ ನಟಿ ಕಂಗನಾ ರಣಾವತ್ ಮತ್ತು ಆಕೆಯ ಸಹೋದರಿ ರಂಗೋಲಿ ಚಾಂಡೆಲ್ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಬಾಂದ್ರಾದ ಮ್ಯಾಜಿಸ್ಟ್ರೇಟ್ ಕೋರ್ಟ್ ಆದೇಶ ನೀಡಿದೆ.

ಕಂಗನಾ ಮತ್ತು ರಂಗೋಲಿ ಟ್ವೀಟ್ ಮಾಡುವ ಮೂಲಕ ಹಿಂದೂ ಮತ್ತು ಮುಸ್ಲಿಂರ ನಡುವೆ ಕೋಮುಗಲಭೆ, ದ್ವೇಷ ಹರಡಿದ್ದಾರೆ ಎಂದು ದೂರಿ ಅವರಿಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಹೇಳಿದೆ.ವಿನ್ಯಾಸಕ ಹಾಗೂ ಫಿಟ್ನೆಸ್ ತರಬೇತುದಾರ ಮುನ್ನಾವರಲಿ ಸಯ್ಯದ್ ನೀಡಿದ ದೂರಿಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ಜಯದೇವ್ ಘುಲೆ ಈ ಆದೇಶವನ್ನು ನೀಡಿದ್ದಾರೆ.

ಐಪಿಸಿ ಸೆಕ್ಷನ್ 153 ಎ, 295 ಎ( ಧರ್ಮವನ್ನು ಅಪಮಾನಿಸುವ ಮೂಲಕ ಕೋಮು ಭಾವನೆ ಕೆರಳಿಸುವ ಚಟುವಟಿಕೆ) ಮತ್ತು 124ಎ ಅನ್ವಯ ದೇಶದ್ರೋಹದ ಆಧಾರದ ಮೇಲೆ ಪ್ರಕರಣ ದಾಖಲಿಸಬೇಕೆಂದು ಸಯ್ಯದ್ ದೂರಿನಲ್ಲಿ ಕೇಳಿಕೊಂಡಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]