Saturday, October 17 , 2020
ಜೋ ಬಿಡನ್ ಪರ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಪ್ರಚಾರ

ವಾಷಿಂಗ್ಟನ್ (17.10.2020): ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡನ್ ಪರ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮುಂದಿನ ವಾರ ಪೆನ್ಸಿಲ್‌ವೇನಿಯಾದಲ್ಲಿ ಪ್ರಚಾರ ನಡೆಸಲಿದ್ದಾರೆ.

ಮುಂದಿನ ಬುಧವಾರ ಒಬಾಮಾ ಫಿಲಡೆಲ್ಫಿಯಾ,ಪೆನ್ಸಿಲ್ ವೇನಿಯಾಕ್ಕೆ ತೆರಳಲಿದ್ದು, ಜೋ ಬಿಡೆನ್ ಮತ್ತು ಕಮಲಾ ಹ್ಯಾರಿಸ್ ಪರ ಪ್ರಚಾರ ನಡೆಸಲಿದ್ದಾರೆ ಎಂದು ಬಿಡೆನ್ ಪರ ಪ್ರಚಾರಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.



ಅಧ್ಯಕ್ಷ ಸ್ಥಾನ ತೊರೆದು ನಾಲ್ಕು ವರ್ಷಗಳಾದರೂ ಒಬಾಮಾ ಅವರ ಭಾಷಣ ಕೌಶಲ ಪ್ರತಿಪಕ್ಷ ಡೆಮಾಕ್ರಟಿಕ್ ನತ್ತ ಹೆಚ್ಚಿನ ಸಂಖ್ಯೆಯ ಜನರನ್ನು ಆಕರ್ಷಿಸುತ್ತಿದೆ.

77 ವರ್ಷದ ಬಿಡೆನ್ ಒಬಾಮಾ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಉಪ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಬಿಡೆನ್ ಹಾಗೂ ಭಾರತೀಯ ಮೂಲದ ಸೆನೆಟರ್ ಕಮಲಾ ಹ್ಯಾರಿಸ್ ಪರ ಆನ್​ಲೈನ್ ಪ್ರಚಾರ ನಡೆಸಲು ಒಬಮಾ ಅನುಮತಿ ನೀಡಿದ್ದಾರೆ. ವೈಯುಕ್ತಿಕವಾಗಿ ಇದೇ ಮೊದಲ ಬಾರಿಗೆ ಮಾಜಿ ಅಧ್ಯಕ್ಷರು ಪ್ರಚಾರ ನಡೆಸಲಿದ್ದಾರೆ.

ಆದರೆ ಟ್ರಂಪ್ ಮಾತ್ರ ಇದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದಿದ್ದಾರೆ. 2016ರಲ್ಲಿ ಅವರು ಕೆಟ್ಟ ಕೆಲಸ ಮಾಡಿದ್ದರಿಂದ ನಾನೀಗ ಅಧ್ಯಕ್ಷನಾಗಿದ್ದೇನೆ, ಅವರ ಪ್ರಚಾರ ಯಾರ ಮೇಲೂ ಪರಿಣಾಮ ಬೀರುವುದಿಲ್ಲ ಎಂದು ಹೇಳಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]