Sunday, September 19 , 2021
ಭವಾನಿಪುರ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಟಿಬ್ರೆವಾಲ್

ಕೋಲ್ಕತ್ತ(13.09.2021): ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಸ್ಫರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಇಂದು ನಾಮಪತ್ರ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಇದು ಅನ್ಯಾಯದ ವಿರುದ್ಧದ ಹೋರಾಟ. ಪಶ್ಚಿಮ ಬಂಗಾಳದ ಜನರ ನ್ಯಾಯಕ್ಕಾಗಿ ಹೋರಾಟ. ಭವಾನಿಪುರದ ಜನರಿಗೆ ಲಭಿಸಿರುವ ದೊಡ್ಡ ಅವಕಾಶ ಇದಾಗಿದೆ. ಜನರು ಮುಂದೆ ಬಿಜೆಪಿಯನ್ನು ಗೆಲ್ಲಿಸಿ ಇತಿಹಾಸ ರಚಿಸಬೇಕು ಎಂದು ಕರೆ ನೀಡಿದ್ದಾರೆ.

ಭವಾನಿಪುರ ಉಪಚುನಾವಣೆಯು ಸೆಪ್ಟೆಂಬರ್ 30ರಂದು ನಡೆಯಲಿದ್ದು, ಅಕ್ಟೋಬರ್ 3ರಂದು ಫಲಿತಾಂಶ ಹೊರಬೀಳಲಿದೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ನಂದಿಗ್ರಾಮದಿಂದ ಸ್ಪರ್ಧಿಸಿದ್ದ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ, ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡಿದ್ದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]