Sunday, September 19 , 2021
ಪೊಲೀಸ್‌ ಠಾಣೆಯಲ್ಲೇ ಖಾಸಗಿ ವ್ಯಕ್ತಿಯ ಬರ್ತಡೇ ಪ್ರಕರಣ: ಸರಗೂರು ಎಸ್‌ಐ, ಕಾನ್‌ಸ್ಟೆಬಲ್‌ ವರ್ಗಾವಣೆ!

ಹೆಚ್.ಡಿ.ಕೋಟೆ (23.07.2021) : ಸರಗೂರು ಪೊಲೀಸ್​ ಠಾಣೆಯ ಎಸ್​ಐ ಯನ್ನು ವರ್ಗಾವಣೆ ಮಾಡುವಲ್ಲಿ ಸ್ಥಳೀಯ ಪತ್ರಿಕೆಯಾದ ಆಂದೋಲನ ಕರ್ತವ್ಯನಿಷ್ಟೆ ಮೆರೆದಿದೆ.

ಖಾಸಗಿ ವ್ಯಕ್ತಿಯೊಬ್ಬ ಸರಗೂರು ಪೊಲೀಸ್ ಠಾಣೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಆರೋಪದ ಮೇಲೆ ಸಬ್ ಇನ್‌ಸ್ಪೆಕ್ಟರ್ ಮತ್ತು ಪೇದೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಸಂಬಂ ಪತ್ರಿಕೆ ಸವಿವರವಾದ ವರದಿ ಮಾಡಿ ಗಮನ ಸೆಳೆದಿತ್ತು.

ಸರಗೂರು ಪಟ್ಟಣದಲ್ಲಿರುವ ಪೊಲೀಸ್ ಠಾಣೆಯಲ್ಲಿ ಇತ್ತೀಚೆಗೆ ಖಾಸಗಿ ವ್ಯಕ್ತಿ ಶಿವು ಎಂಬಾತನ ಹುಟ್ಟುಹಬ್ಬವನ್ನು ಸಬ್ ಇನ್‌ಸ್ಪೆಕ್ಟರ್ ದಿವ್ಯ ಅವರ ಕೊಠಡಿಯಲ್ಲಿ ಅನೇಕ ಪೊಲೀಸರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಆಚರಿಸಲಾಗಿತ್ತು. ಈ ವಿಚಾರ ತಾಲ್ಲೂಕು ವ್ಯಾಪ್ತಿಯಲ್ಲಿ ಮತ್ತು ಸಾರ್ವಜನಿಕರು, ಜನಪ್ರತಿನಿಧಿಗಳ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.

ಘಟನೆ ಸಂಬಂಧ ಎಸ್‌ಪಿ ಚೇತನ್ ಅವರು ದಿವ್ಯಾ ಅವರನ್ನು ಹುಣಸೂರು ಪಟ್ಟಣದ ಪೊಲೀಸ್ ಠಾಣೆಗೆ ಒಒಡಿಯಾಗಿ ಕೆಲಸ ನಿರ್ವಹಿಸಲು ವರ್ಗಾವಣೆ ಮಾಡಿ, ಇವರ ಸ್ಥಳಕ್ಕೆ ಸಬ್​ಇನ್‌ಸ್ಪೆಕ್ಟರ್ ಸುಷ್ಮಾ ಅವರನ್ನು ನೇಮಕ ಮಾಡಿದ್ದಾರೆ. ಪೇದೆ ಚೇತನ್ ಕುಮಾರ್ ಅವರನ್ನು ನಂಜನಗೂಡಿನ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಿ, ಮತ್ತಷ್ಟು ತನಿಖೆ ನಡೆಸುವಂತೆ ಸೂಚಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]