Monday, July 26 , 2021
NEET ಅಧ್ಯಯನ ಸಮಿತಿ ವಿರುದ್ಧದ ಬಿಜೆಪಿ ಅರ್ಜಿ ವಜಾ

ಚೆನ್ನೈ (13-07-2021): ವೈದ್ಯಕೀಯ ಕೋರ್ಸ್ ಗೆ ಪ್ರವೇಶ ಪಡೆಯಲು ನೀಟ್(ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ) ಪರೀಕ್ಷೆಯನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿರುವುದರಿಂದ ಸರ್ಕಾರಿ ಶಾಲೆ ಹಾಗೂ ಗ್ರಾಮೀಣ ಪ್ರದೇಶದ ವಿಧ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವಾಗುತ್ತಿದೆ. ನೀಟ್ ಪರೀಕ್ಷೆಯ ಸಾಧಕ ಭಾದಕಗಳ ಬಗ್ಗೆ ಅಧ್ಯಯನ ನಡೆಸಲು ತಮಿಳುನಾಡಿನ ಸರ್ಕಾರವು ಸಮಿತಿಯೊಂದನ್ನು ರಚಿಸಿದೆ.

ನೀಟ್ ಪರೀಕ್ಷೆಯಿಂದಾಗಿ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಆದ್ದರಿಂದ ನೀಟ್ ಪರೀಕ್ಷೆಯ ಪರಿಣಾಮದ ಬಗ್ಗೆ  ಅಧ್ಯಯನ ಮಾಡಲು ತಮಿಳುನಾಡಿನ ಡಿಎಂಕೆ ಸರ್ಕಾರವು ಸಮಿತಿಯನ್ನು ರಚಿಸಿದೆ. ಈ ಸಮಿತಿಯನ್ನು ವಜಾಗೊಳಿಸುವಂತೆ ತಮಿಳುನಾಡಿನ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗರಾಜನ್ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ತಮಿಳುನಾಡಿನ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಸಂಜೀಬ್ ಬ್ಯಾನರ್ಜಿ ನೇತೃತ್ವದ ಪೀಠವು ಈ ಅರ್ಜಿಯನ್ನು ವಜಾಗೋಳಿಸಿದೆ.

2017 ನೇ ಸಾಲಿನ ಪಿಯುಸಿ  ಪರೀಕ್ಷೆಯಲ್ಲಿ  ಅನಿತಾ ಎಂಬ ಗ್ರಾಮೀಣ ಪ್ರದೇಶದ ಹಾಗೂ ತಮಿಳು ಮಾದ್ಯಮದಲ್ಲಿ ವ್ಯಾಸಂಗ ಮಾಡಿದ ಅನಿತಾ ಎಂಬ ವಿದ್ಯಾರ್ಥಿನಿಯು ತಮಿಳುನಾಡು ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದರು.  ತಾನು ವೈದ್ಯಕೀಯ ಕೋರ್ಸ್ ಅಧ್ಯಯನ ಮಾಡಿ ಡಾಕ್ಟರ್ ಆದ ಬಳಿಕ ಗ್ರಾಮೀಣ ಪ್ರದೇಶದ ಸೇವೆ ಮಾಡಬೇಕೆಂಬ ಬಯಕೆಯಲ್ಲಿದ್ದಳು. ಆದರೆ ನೀಟ್ ಪರೀಕ್ಷೆಯಲ್ಲಿ ಆಕೆ ಅರ್ಹತೆ ಪಡೆಯಲು ಸಾದ್ಯವಾಗಲಿಲ್ಲ. ಡಾಕ್ಟರ್ ಆಗಬೇಕೆಂಬ ಮಹದಾಸೆಯಿಂದ ಚೆನೈ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ನೀಟ್ ಪರೀಕ್ಷೆಯ ಮಾನದಂಡಗಳ ಬಗ್ಗೆ ಪ್ರಶ್ನೆ ಮಾಡುತ್ತಾಳೆ ಆದರೆ ಆಕೆಗೆ ನ್ಯಾಯ ಸಿಗದ ಕಾರಣ ಸಾವಿಗೆ ಶರಣಾಗುತ್ತಾಳೆ. ಆದ್ದರಿಂದ ಡಿಎಂಕೆ ಸರ್ಕಾರವು ನೀಟ್ ಪರೀಕ್ಷೆಯ ಬಗ್ಗೆ ಅದ್ಯಯನ ನಡೆಸಲು ಸಮಿತಿ ರಚಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]