Monday, July 26 , 2021
ಪಾಕಿಸ್ತಾನದಲ್ಲಿ ಬಸ್‌ನಲ್ಲಿ ಸ್ಫೋಟ, 13 ಮಂದಿ ದುರ್ಮರಣ

ಇಸ್ಲಮಾಬಾದ್(14.07.2021): ವಾಯುವ್ಯ ಪಾಕಿಸ್ತಾನದ ಬಸ್‌ನಲ್ಲಿ ಸ್ಫೋಟ ಸಂಭವಿಸಿದ್ದು, 9 ಮಂದಿ ಚೀನಾದ ಕಾರ್ಮಿಕರು ಹಾಗೂ ಪಾಕಿಸ್ತಾನದ ಇಬ್ಬರು ಸೈನಿಕರು ಸೇರಿ 13 ಮಂದಿ ದಾರುಣ ಅಂತ್ಯ ಕಂಡಿದ್ದಾರೆ.

ಇದು ಭಾರಿ ಸ್ಫೋಟವಾಗಿದೆ ಆದರೆ ಸ್ಫೋಟದ ಸ್ವರೂಪ ಇನ್ನೂ ತಿಳಿದುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಸ್ ನೊಳಗೆ ಅಥವಾ ರಸ್ತೆ ಬದಿ ಸ್ಫೋಟಕ ಇಟ್ಟು ಉಡಾಯಿಸಿರುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ.

ಚೀನಾದ ಎಂಜಿನಿಯರ್‌ಗಳು, ಸರ್ವೇಯರ್‌ಗಳು ಮತ್ತು ಮೆಕ್ಯಾನಿಕಲ್ ಸಿಬ್ಬಂದಿ ಸೇರಿದಂತೆ ಒಟ್ಟು 30 ಮಂದಿಯನ್ನು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಸು ಅಣೆಕಟ್ಟು ನಿರ್ಮಾಣ ಸ್ಥಳಕ್ಕೆ ಬಸ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು ಎಂದು ಸ್ಥಳೀಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]