Monday, July 26 , 2021
ಜಾತಿಗಣತಿ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಕೇಂದ್ರ

ನವದೆಹಲಿ (21.07.2021) : ಜಾತಿಗಣತಿ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೊರತುಪಡಿಸಿ ಉಳಿದ ಜಾತಿಗಣತಿ ಇಲ್ಲವೆಂದು ಕೇಂದ್ರ ಸರ್ಕಾರ ಲೋಕಸಭೆಗೆ ಸ್ಪಷ್ಟಪಡಿಸಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಈ ಬಗ್ಗೆ ಮಾಹಿತಿ ನೀಡಿದ್ದು, ಎಸ್ಸಿ,ಎಸ್ಟಿ ಹೊರತುಪಡಿಸಿ ಇತರೆ ಜನಸಂಖ್ಯೆಯ ಜಾತಿ ಗಣತಿಯನ್ನು ನಡೆಸದಿರಲು ಸರ್ಕಾರ ನಿರ್ಧರಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಹೊರತುಪಡಿಸಿ ಉಳಿದ ಜಾತಿಗಳ ಗಣತಿ ಮಾಡದಿರಲು ತೀರ್ಮಾನಿಸಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]