Sunday, May 9 , 2021
ಚಾಮರಾಜನಗರ ಆಸ್ಪತ್ರೆಯಲ್ಲಿ ಸೋಂಕಿತರ ಸಾವು ಪ್ರಕರಣ, ತನಿಖೆಗೆ ಆದೇಶಿಸಿದ ರಾಜ್ಯ ಸರ್ಕಾರ

ಚಾಮರಾಜನಗರ (03.05.2021) :  ಭಾನುವಾರ ಮಧ್ಯರಾತ್ರಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ 24 ಜನ ಸೋಂಕಿತ ರೋಗಿಗಳ ಸಾವಿಗೆ ಸಂಬಂಧಪಟ್ಟಂತೆ ತನಿಖೆಗೆ ರಾಜ್ಯ ಆದೇಶಿಸಲಾಗಿದೆ.

ಈ ಸಬಂಧ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಆದೇಶ ಹೊರಡಿಸಿದ್ದು, ಮೂರು ದಿನಗಳ ಒಳಗಾಗಿ ತನಿಖಾ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಐಎಎಸ್‌ ಅಧಿಕಾರಿ ಶಿವಯೋಗಿ ಕಳಸದ (ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ) ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಲಾಗಿದೆ. ಘಟನೆಯ ಕುರಿತಾಗಿ ತನಿಖಾ ವರದಿಯನ್ನು ಮೂರು ದಿನಗಳ ಒಳಗಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಚಾಮರಾಜನಗರ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯ ಒಳಗಾಗಿ ಕೋವಿಡ್ ಸೋಂಕಿಗೆ ತುತ್ತಾದ 24 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]