Friday, January 15 , 2021
ಬೆಂಗಳೂರು ರಸ್ತೆಯ ಗುಂಡಿಯಿಂದ ಅಪಘಾತವಾದರೆ ಬಿಬಿಎಂಪಿಯಿಂದ ಪರಿಹಾರ

ಬೆಂಗಳೂರು (04.12.2020) : ಬಿಬಿಎಂಪಿ ತನ್ನ ತಪ್ಪಿಗೆ ದಂಡ ತೆರಲು ಸಿದ್ಧವಾಗಿದೆ. ರಸ್ತೆ ಗುಂಡಿಯಿಂದ ಅಪಘಾತವಾದರೆ ಸಂತ್ರಸ್ತರಿಗೆ 5 ಸಾವಿರದಿಂದ 3 ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲು ಮುಂದಾಗಿದೆ.

ಈ ವಿಚಾರವಾಗಿ ಹೈಕೋರ್ಟ್ ಪಾಲಿಕೆಗೆ ಚಾಟಿ ಬೀಸಿದೆ. ಹೈಕೋರ್ಟ್ ಏಟಿಗೆ ಎಚ್ಚೆತ್ತ ಬಿಬಿಎಂಪಿ ತನ್ನ ತಪ್ಪಿಗೆ ದಂಡ ತೆರಲು ಸಿದ್ಧವಾಗಿದೆ. ಗುಂಡಿಯಿಂದಾಗಿ ಅಪಘಾತಕ್ಕೆ ಒಳಗಾದವರು ಪರಿಹಾರ ಪಡೆಯಲು ಬಿಬಿಎಂಪಿ ಹೊಸ ಗೈಡ್‌ಲೈನ್ಸ್ ಪ್ರಕಟಿಸಿದ್ದು. ಫುಟ್ ಪಾತ್ ಗಳ ಎಡವಟ್ಟಿನಿಂದ ಗಾಯಗೊಂಡವರು ಪರಿಹಾರ ಪಡೆಯಬಹುದಾಗಿದೆ. ಸಣ್ಣಪುಟ್ಟ ಗಾಯಗಳಾದವರಿಗೆ 5 ಸಾವಿರ ರೂಪಾಯಿ, ಮೂರು ದಿನಗಳವರೆಗೆ ಚಿಕಿತ್ಸೆಗೆ ದಾಖಲಾದವರಿಗೆ 10 ರಿಂದ 15 ಸಾವಿರ ರೂಪಾಯಿ ಪರಿಹಾರ ನೀಡಲಾಗುತ್ತದೆ.

ಇನ್ನು ರಸ್ತೆಗುಂಡಿಯಿಂದಾಗಿ ಆಗುವ ಅಪಘಾತದಲ್ಲಿ ಸಾವಿಗೀಡಾದವರಿಗೆ 3 ಲಕ್ಷ ಪರಿಹಾರ ನೀಡಬೇಕು. ಅಫಘಾತಕ್ಕೆ ಒಳಗಾದ ಸಂತ್ರಸ್ತರು ಪೊಲೀಸ್ ದೂರಿನೊಂದಿಗೆ ಬಿಬಿಎಂಪಿ ವಲಯ ಆಯುಕ್ತರಿಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದ್ದು. ಸಾಕ್ಷಿಗಳಾಗಿ ಪೊಲೀಸ್ ದೂರು, ಪ್ರತ್ಯಕ್ಷದರ್ಶಿಯ ಹೇಳಿಕೆ ಮತ್ತು ಸಿಸಿಟಿವಿ ದೃಶ್ಯಗಳನ್ನು ಪರಿಗಣಿಸಿ ಪರಿಹಾರ ನೀಡಲಾಗುತ್ತದೆ. ಇನ್ಉ ಅಪಘಾತವಾದ ದಿನದಿಂದ 30 ದಿನಗಳ ಒಳಗೆ ಪರಿಹಾರಕ್ಕಾಗಿ ಅರ್ಜಿ ಸಲ್ಲಿಕೆ ಮಾಡಬೇಕು.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]