Sunday, September 19 , 2021
ಅಲ್ಪಸಂಖ್ಯಾತರಿಗೆ ಕೋಟಾ ಪ್ರಶ್ನಿಸಿದ್ದ ಹಿಂದೂ ಸೇವಾಕೇಂದ್ರ ಸಂಸ್ಥೆಗೆ ದಂಡ ವಿಧಿಸಿದ ಹೈಕೋರ್ಟ್

ಕೊಚ್ಚಿ   (25.07.2021) :  ಬೇರೆ ಧರ್ಮಕ್ಕೆ ಮತಾಂತರಗೊಂಡಿರುವರೆಲ್ಲರೂ ಪರಿಶಿಷ್ಟ ಜಾತಿಗಳಿಗೆ ಸೇರಿದವರು. ಹಿಂದುಳಿದ ವರ್ಗಗಳಾಗಿ ಪರಿಗಣಿಸಲು ಅರ್ಹರಲ್ಲ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಕೇರಳ ಉಚ್ಚ ನ್ಯಾಯಾಲಯವು, ಅರ್ಜಿದಾರ ಎರ್ನಾಕುಳಮ್ನ ಹಿಂದು ಸೇವಾಕೇಂದ್ರಂ ಸಂಸ್ಥೆಗೆ 25,000 ರೂ.ಗಳ ದಂಡವನ್ನು ವಿಧಿಸಿ ಆದೇಶಿಸಿದೆ.

ಇನ್ನು ರಾಜ್ಯದಲ್ಲಿ ಅಪರೂಪದ ಕಾಯಿಲೆಗಳಿಂದ ನರಳುತ್ತಿರುವ ಮಕ್ಕಳಿಗೆ ಆರ್ಥಿಕ ನೆರವು ಒದಗಿಸಲು ಆರಂಭಿಸಲಾಗಿರುವ ಬ್ಯಾಂಕ್ ಖಾತೆಗೆ ದಂಡದ ಮೊತ್ತವನ್ನು ಒಂದು ತಿಂಗಳೊಳಗೆ ಜಮಾ ಮಾಡುವಂತೆ ಸೇವಾಕೇಂದ್ರಂ ಸಂಸ್ಥೆಗೆ ಆದೇಶಿಸಿರುವ ನ್ಯಾಯಾಲಯವು,ತಪ್ಪಿದಲ್ಲಿ ಕೇರಳ ಕಂದಾಯ ವಸೂಲಿ ಕಾಯ್ದೆ 1968ರಡಿ ಕಾನೂನು ಕ್ರಮಗಳನ್ನು ಆರಂಭಿಸುವುದಾಗಿ ಎಚ್ಚರಿಕೆ ನೀಡಿದೆ.

ಹಿಂದು ಸೇವಾಕೇಂದ್ರ ಖಜಾಂಚಿ ಶ್ರೀಕುಮಾರ ಮಂಕುಝಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿದೆ

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]