Friday, December 4 , 2020
ಗೋವುಗಳ ರಕ್ಷಣೆಗೆ ಮಧ್ಯಪ್ರದೇಶದಲ್ಲಿ ಪ್ರತ್ಯೇಕ ಸಚಿವ ಸಂಪುಟ ಘೋಷಿಸಿದ ಸಿಎಂ

ಭೋಪಾಲ್ (18-11-2020): ರಾಜ್ಯದಲ್ಲಿ ಗೋವುಗಳ ರಕ್ಷಣೆಗಾಗಿ ಗೋ ಸಚಿವ ಸಂಪುಟ ರಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

ಪಶುಸಂಗೋಪನ, ಅರಣ್ಯ, ಪಂಚಾಯತ್, ಗ್ರಾಮೀಣಾಭಿವೃದ್ಧಿ, ಗೃಹ ಮತ್ತು ರೈತ ಕಲ್ಯಾಣ ಇಲಾಖೆಗಳು ಗೋ ಕ್ಯಾಬಿನೆಟ್​​ನ ಭಾಗವಾಗಲಿದೆ ಎಂದು ಘೋಷಿಸಿದರು.

‘ರಾಜ್ಯದಲ್ಲಿ ಗೋ ರಕ್ಷಣೆ ಮತ್ತು ಉತ್ತೇಜನಕ್ಕಾಗಿ ‘ಗೋ ಮಂಡಳಿ’ ಸ್ಥಾಪಿಸಲು ನಿರ್ಧರಿಸಲಾಗಿದೆ. ಪಶುಸಂಗೋಪನ, ಅರಣ್ಯ, ಪಂಚಾಯತ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಗೃಹ ಮತ್ತು ರೈತರ ಕಲ್ಯಾಣ ಇಲಾಖೆ ‘ಗೋವು ಕ್ಯಾಬಿನೆಟ್’ನ ಭಾಗವಾಗಲಿದೆ. ನವೆಂಬರ್ 22ರಂದು ಮಧ್ಯಾಹ್ನ 12 ಗಂಟೆಗೆ ಅಗರ್ ಮಾಳ್ವದ ಗೋ ಅಭಯಾರಣ್ಯದಲ್ಲಿ ಮೊದಲ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]