
ಬೆಂಗಳೂರು (23.02.2021) : ಒಕ್ಕಲಿಗರಿಗೆ ಪ್ರವರ್ಗ 3ಎ ನಲ್ಲಿ ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕು ಹಾಗೂ ಒಕ್ಕಲಿಗರ ಅಭಿವೃದ್ಧಿ ಪ್ರಾಧಿಕಾರ ರಚಿಸುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಾಗಿದೆ .
ಮುಖ್ಯಮಂತ್ರಿಗಳಿಗೆ ಬರೆದಿರುವ ಎರಡು ಪ್ರತ್ಯೇಕ ಮನವಿಗಳನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಕಂದಾಯ ಸಚಿವ ಆರ್. ಅಶೋಕ್ ಅವರು ಸ್ವೀಕರಿಸಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಒಕ್ಕಲಿಗರ ಮೀಸಲಾತಿ ಹೋರಾಟ ಸಮಿತಿಯಿಂದ ಮನವಿ ನೀಡಲಾಯಿತು.