Monday, July 26 , 2021
ದಿಢೀರ್​ ಆಗಿ ಪೊಲೀಸ್​ ಠಾಣೆಗೆ ಹಾಜರಾದ ಚಾಲೆಂಜಿಂಗ್​ ಸ್ಟಾರ್​ ದರ್ಶನ್​: ಕಾರಣ ಏನು ಗೊತ್ತಾ?

ಮೈಸೂರು(11.07.2021) : ನಕಲಿ ದಾಖಲೆ ಸೃಷ್ಠಿಸಿ ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಅವರ ಹೆಸರಲ್ಲಿ 25 ಕೋಟಿ ರೂ. ಸಾಲ ಪಡೆದು ವಂಚನೆಗೆ ಯತ್ನ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎಸಿಪಿಗೆ ಕಚೇರಿಗೆ ಆಗಮಿಸಿದ್ದಾರೆ.

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿ, ಇದೊಂದು ಸಣ್ಣ ವಿಚಾರ, ಬ್ಲಾಕ್ ಮೇಲ್ ಅಲ್ಲ. ನಮ್ಮದೊಂದು ಡಾಕ್ಯುಮೆಂಟ್ ಪೋರ್ಜರಿ ಆಗಿದೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನೀವೇ ಎಲ್ಲ ಊಹಾಪೋಹ ಮಾಡಬೇಡಿ. ಪೊಲೀಸರಿಗೆ ತನಿಖೆ ಮಾಡಲಿ. ನಾನೊಂದು ಹೇಳುವುದು, ಅದು ಬೇರೆಯಾಗಿ ತಪ್ಪಾಗುವುದು ಬೇಡ. ನಿರ್ಮಾಪಕ ಉಮಾಪತಿ ನಾವೆಲ್ಲರೂ ಚೆನ್ನಾಗಿದ್ದೇವೆ. ಕಳೆದ ತಿಂಗಳು ನಡೆದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಬಾಯಿ ಬಿಡಿಸುತ್ತಾರೆ. ನಮಗೆ ಇದೊಂದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಇದರ ಹೊರತಾಗಿ ನನಗೇನೂ ಗೊತ್ತಿಲ್ಲ. ತನಿಖೆ ಬಳಿಕ ಸತ್ಯಾಂಶ ಹೊರ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

ನಿರ್ಮಾಪಕ ಉಮಾಪತಿ ಅವರೇ ಈ ಬಗ್ಗೆ ಬೆಂಗಳೂರು ಜಯನಗರ ಪೊಲೀಸರಿಗೆ ಮಾಹಿತಿ ನೀಡಿದ್ದು, ದರ್ಶನ್ ಸ್ನೇಹಿತರು ಕೂಡ ಮೈಸೂರು ಹೆಬ್ಬಾಳ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್ ಅವರಿಗೆ ಸಂಬಂಧಿಸಿದ ಆಸ್ತಿ ದಾಖಲೆ ಪೋರ್ಜರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಲೋನ್ ಮಾಡಿಕೊಡುವುದಾಗಿ ಹೇಳಿಕೊಂಡಿದ್ದವರ ವಿರುದ್ಧ ಪೊಲೀಸರಿಗೆ ದೂರು ನೀಡಿರುವುದಾಗಿ ನಿರ್ಮಾಪಕ ಉಮಾಪತಿ ತಿಳಿಸಿದ್ದಾರೆ. ಲೋನ್ ಬೇಕಾ ಎಂದು ಅವರೇ ಬಂದಿದ್ದರಿಂದ ವಿಚಾರಿಸಿದಾಗ ಅವರು ಬ್ಯಾಂಕ್ ಸಿಬ್ಬಂದಿ ಅಲ್ಲ ಎನ್ನುವುದು ಗೊತ್ತಾಗಿ ದೂರು ನೀಡಲಾಗಿದೆ. ದರ್ಶನ್ ಮತ್ತು ಉಮಾಪತಿ ಅವರ ಆಸ್ತಿ ನಕಲಿ ದಾಖಲೆ ಸೃಷ್ಠಿಸಲಾಗಿದೆ ಎಂದು ತಿಳಿದುಬಂದಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]