
ನವದೆಹಲಿ (31-12-2020): ಮೂರು ತಿಂಗಳ ವಿಳಂಬದ ಬಳಿಕ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) 10 ಮತ್ತು 12ನೇ ತರಗತಿಯ ಪರೀಕ್ಷೆಗಳು ಮೇ 4ರಿಂದ ಜೂನ್ 10ರವರೆಗೆ ನಡೆಯಲಿದ್ದು, ಜುಲೈ 15ರಂದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ತಿಳಿಸಿದ್ದಾರೆ.
10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳು ಮೇ 4ರಿಂದ ಜೂನ್ 10ರವರೆಗೆ ನಡೆಯಲಿವೆ. ಮಾರ್ಚ್ 1ರಿಂದ ಪ್ರಾಯೋಗಿಕ ಪರೀಕ್ಷೆ ನಡೆಸಲು ಶಾಲೆಗಳಿಗೆ ಅವಕಾಶ ನೀಡಲಾಗುವುದು. ಎರಡೂ ತರಗತಿಗಳಿಗೆ ದಿನಾಂಕದ ಪಟ್ಟಿಯನ್ನು ಶೀಘ್ರದಲ್ಲೇ ವಿತರಿಸಲಾಗುವುದು. ಜುಲೈ 15ರ ವೇಳೆಗೆ ಫಲಿತಾಂಶ ಪ್ರಕಟಿಸಲಾಗುವುದುಎಂದು ಪೊಖ್ರಿಯಾಲ್ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಮೂರು ತಿಂಗಳ ವಿಳಂಬವು ಕಾಲೇಜು ಪ್ರವೇಶದ ಮೇಲೆ, ವಿಶೇಷವಾಗಿ ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರ ಮೇಲೆ ಬೀರಿದೆ. ಸಾಮಾನ್ಯವಾಗಿ ಜನವರಿಯಲ್ಲಿ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಮತ್ತು ಫೆಬ್ರವರಿ ತಿಂಗಳಲ್ಲಿ ಸಿದ್ಧಾಂತ ಪರೀಕ್ಷೆಗಳು ಪ್ರಾರಂಭವಾಗಿ ಮಾರ್ಚ್ನಲ್ಲಿ ಮುಕ್ತಾಯವಾಗುತ್ತವೆ.