Saturday, October 17 , 2020
ಗಬ್ಬರ್​ ಶತಕದ ಬಲ: ಸಿಎಸ್​ಕೆ ವಿರುದ್ಧ ಡೆಲ್ಲಿಗೆ ರೋಚಕ ಜಯ ತಂದುಕೊಟ್ಟ ಅಕ್ಷರ್​ ಪಟೇಲ್

ಶಾರ್ಜಾ(17.10.2020): ಕೊನೆಯ ಓವರ್​ನಲ್ಲಿ ಮೂರು ಸಿಕ್ಸರ್​ ಸಿಡಿಸುವ ಮೂಲಕ ಅಕ್ಷರ್​ ಪಟೇಲ್ ಡೆಲ್ಲಿ ಕ್ಯಾಪಿಟಲ್ಸ್​ಗೆ 5 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟಿದ್ದಾರೆ. ಈ ಗೆಲುವಿನ ಮೂಲಕ ಡೆಲ್ಲಿ ತಂಡ ಮುಂಬೈ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದೆ.

ಟಾಸ್​ ಗೆದ್ದು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್​ ಕಿಂಗ್ಸ್​ 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡರು 179 ರನ್​ಗಳಿಸಿತ್ತು. ಪ್ಲೆಸಿಸ್​ 58, ರಾಯುಡು 45 ಹಾಗೂ ಜಡೇಜಾ 33 ರನ್​ಗಳಿಸಿದ್ದರು.

180 ರನ್​ಗಳ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್​ 5 ವಿಕೆಟ್ ಕಳೆದುಕೊಂಡರು ಇನ್ನು 1ಎಸೆತ ಇರುವಂತೆ ಗೆಲುವಿನ ನಗೆ ಬೀರಿತು. ಆರಂಭಿಕ ಪೃಥ್ವಿ ಶಾ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ನಿರಾಶೆ ಮೂಡಿಸಿದರು. ಚಹಾರ್​ ನಂತರ ಬಂದ ರಹಾನೆ(8)ಯನ್ನು ಔಟ್​ ಮಾಡುವ ಮೂಲ ಡೆಲ್ಲಿಗೆ ಮತ್ತೊಂದು ಆಘಾತ ನೀಡಿದರು.ಆದರೆ ನಾಯಕ ಶ್ರೇಯಸ್ ಅಯ್ಯರ್​(23) ಹಾಗೂ ಸ್ಟೋಯ್ನಿಸ್(24) ರನ್​ಗಳಿಸಿ​ ಧವನ್​ಗೆ ಸಾಥ್​ ನೀಡಿದರು.



ಕೊನೆಯ ಓವರ್​ನಲ್ಲಿ ಡೆಲ್ಲಿಗೆ ಗೆಲ್ಲಲು 18 ರನ್​ಗಳ ಅವಶ್ಯಕತೆಯಿತ್ತು. ಬ್ರಾವೋ ಗಾಯಗೊಂಡಿದ್ದರಿಂದ ಜಡೇಜಾ ಕೈಗೆ ಧೋನಿ ಬೌಲಿಂಗ್ ನೀಡಿದರು. ಅಕ್ಷರ್ ಪಟೇಲ್ ಜಡೇಜಾ ಓವರ್​ನಲ್ಲಿ 3 ಸಿಕ್ಸರ್​ ಸಿಡಿಸಿ ಡೆಲ್ಲಿಗೆ 5 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು.

ಆರಂಭಿಕನಾಗಿ ಕಣಕ್ಕಿಳಿದು ಕೊನೆಯವರೆಗೂ ಔಟಾಗದೆ ಉಳಿದ ಧವನ್​ 58 ಎಸೆತಗಳಲ್ಲಿ 14 ಬೌಂಡರಿ 1 ಸಿಕ್ಸರ್​ ಸಹಿತ 101 ರನ್​ಗಳಿಸಿದರೆ, ಅಕ್ಷರ್ ಪಟೇಲ್ 5 ಎಸೆತಗಳಲ್ಲಿ 21 ರನ್​ಗಳಿಸಿ ಗೆಲುವಿನ ರೂವಾರಿಯಾದರು.

ಸಿಎಸ್​ಕೆ ಪರ ದೀಪಕ್ ಚಹಾರ್​ 18ಕ್ಕೆ 2, ಸ್ಯಾಮ್​ ಕರನ್​, ಬ್ರಾವೋ ಹಾಗೂ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]