
ಬೆಂಗಳೂರು (21.01.2021) : ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ಹೊರಡಿಸಿದೆ .
ಜನವರಿ 15ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಆದೇಶ ನೀಡಿದೆ. ಆದರೆ, ರಾಜ್ಯದ ನಾನಾ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ಕಂಡು ಬಂದಿರುವುದರಿಂದ ಪಾಠ ಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತೀವ್ರ ಹಿನ್ನೆಡೆಯಾಗಿದೆ.
ಈ ನಡುವೆ ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಉಪನ್ಯಾಸಕರನ್ನು ಷರತ್ತುಗಳ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂಬ ಮಾಹಿತಿ ತಿಳಿದುಬಂದಿದೆ.