Friday, December 4 , 2020
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣ: ಬಂಧನವಾಗ್ತಾರಾ ಸಂಪತ್​ರಾಜ್​ !?

ಬೆಂಗಳೂರು (15.10.2020) : ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್​​ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಹೀರ್​​ನನ್ನು ಬಂಧಿಸಬೇಕೆಂದು ಸಿಸಿಬಿ ಸಿದ್ಧತೆ ನಡೆಸುತ್ತಿದೆ ಎನ್ನಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ‌ ದೋಷಾರೋಪ‌ಣ ಪಟ್ಟಿ ಸಲ್ಲಿಸಿ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಸಂಬಂಧಿಸಿದ ತನಿಖೆಯ ವಿಚಾರವನ್ನು ಎಳೆ ಎಳೆಯಾಗಿ ಉಲ್ಲೇಖಿಸಿದ್ದಾರೆ. ಮತ್ತೊಂದೆಡೆ ಗಲಭೆಯ ಹಿಂದೆ ಎಸ್​​ಡಿಪಿಐ ಮುಖಂಡರು ಹಾಗೂ ಭಯೋತ್ಪಾದಕರ ನಂಟು ಇರುವ ಆರೋಪದ ಜಾಡಿನ ತನಿಖೆಯನ್ನು ಎನ್​​ಐ‌ಎ ಚುರುಕುಗೊಳಿದೆ.


ಶಾಸಕರಾದ ಜಮೀರ್ ಅಹಮ್ಮದ್ ಹಾಗೂ ರಿಜ್ವಾನ್ ಹರ್ಷದ್ ಅವರ ಹೇಳಿಕೆ ಪಡೆದಿದ್ದ ಎನ್​​ಐಎ ಗಲಭೆಯ ಕೆಲ ಮಾಹಿತಿಗಳನ್ನು ಕಲೆಹಾಕಿತ್ತು. ಸದ್ಯ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್​​​ ರಾಜ್ ಅವರ ಪಾತ್ರದ ಬಗ್ಗೆ ಸಿಸಿಬಿ ಪೊಲೀಸರು ದೋಷಾರೋಪ ಪಟ್ಟಿಯಲ್ಲಿ ಸ್ಪಷ್ಟವಾಗಿ ಉಲ್ಲೇಖ ಮಾಡಿದ್ದಾರೆ. ಈ ಕಾರಣಕ್ಕಾಗಿ ತನಿಖೆ ನಡೆಸಿದ ಸಿಸಿಬಿ ಹೆಚ್ಚುವರಿ ಆಯುಕ್ತರು ಹಾಗೂ ಸಿಸಿಬಿ ಡಿಸಿಪಿಗಳ ಬಳಿಯಿಂದ ಕೂಡ ಎನ್​ಐಎ ಮಾಹಿತಿ ಪಡೆಯಲು ನಿರ್ಧಾರ ಮಾಡಿದೆ.

ಈಗಾಗಲೇ ಘಟನೆ ನಡೆದ ವೇಳೆ ಇದ್ದ 18 ಪೊಲೀಸರ ಹೇಳಿಕೆಯನ್ನ ಕೂಡ ಎನ್​​ಐಎ ಪಡೆದಿದೆ.ಹಾಗೆಯೇ ಸಿಸಿಬಿ ಪೊಲೀಸರು ಕೂಡ ಸದ್ಯ ಮಾಜಿ ಮೇಯರ್ ಸಂಪತ್​​ ರಾಜ್ ಹಾಗೂ ಮಾಜಿ ಕಾರ್ಪೋರೇಟರ್ ಅಬ್ದುಲ್ ರಕೀಬ್ ಜಾಹೀರ್​​ನನ್ನು ಬಂಧಿಸಬೇಕೆಂದು ನಿರ್ಧರಿಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ. ಸಂಪತ್​ ರಾಜ್ ಖಾಸಗಿ ಆಸ್ಪತ್ರೆಯಲ್ಲಿರುವ ಕಾರಣ ಆರೋಗ್ಯದ ಸ್ಥಿತಿಗತಿ ಬಗ್ಗೆ ವೈದ್ಯರ ಬಳಿ‌ ಮಾಹಿತಿ ಪಡೆಯುತ್ತಿದ್ದು, ಆರೋಗ್ಯ ಚೇತರಿಕೆ ಕಂಡ ಕೂಡಲೇ ವಶಕ್ಕೆ ಪಡೆದು ತನಿಖೆ ನಡೆಸಲಿದ್ದಾರೆ. ಸಿಸಿಬಿ ಬಂಧನ ಬಳಿಕ ಸಂಪತ್​ ರಾಜ್​​​ ಎನ್​​ಐಎ ತನಿಖೆ ಎದುರಿಸುವುದು ಅನಿವಾರ್ಯವಾಗಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]