Friday, March 5 , 2021
ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೊಟ್ರು ಶುಭ ಸುದ್ದಿ : ಏನದು?
suresh kumar

ಬೆಂಗಳೂರು (23.02.2021) : ರಾಜ್ಯದಲ್ಲಿ ಬರೋಬ್ಬರಿ 11 ತಿಂಗಳ ನಂತರ 6, 7, 8 ನೇ ತರಗತಿಗಳು ಆರಂಭವಾಗಿ ವಿದ್ಯಾರ್ಥಿಗಳು ಖುಷಿಯಿಂದ ಶಾಲೆಗೆ ಬಂದಿದ್ದಾರೆ.ಆದರೆ, ಕೊರೊನಾ ಸೋಂಕು ಪ್ರಸರಣ ಹೆಚ್ಚಾಗುತ್ತಿರುವ ಕಾರಣ ಶಾಲೆಗಳಲ್ಲಿ ಹಾಜರಾತಿ ಮತ್ತು ದಾಖಲಾತಿ ನಿಯಮ ಸಡಿಲಿಕೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಹಾಜರಾತಿ ಮತ್ತು ದಾಖಲಾತಿ ಕಡಿಮೆಯಾದ ಹಿನ್ನೆಲೆ ಪ್ರಸಕ್ತ ಸಾಲಿಗೆ ಸೀಮಿತಗೊಳಿಸಿ ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯುವ ಮತ್ತು ಆರ್.ಟಿ.ಇ. ಶುಲ್ಕ ಮರುಪಾವತಿಗೆ ಸಂಬಂಧಿಸಿದ ನಿಯಮಗಳಲ್ಲಿ ವಿನಾಯಿತಿ ನೀಡಲು ಸಚಿವರು ಸೂಚನೆ ನೀಡಿದ್ದಾರೆ. ಶಾಲೆಗಳು ತಡವಾಗಿ ಆರಂಭವಾಗಿವೆ. ಮಕ್ಕಳ ಶಾಲಾ ಹಾಜರಾತಿಯನ್ನು ಪೋಷಕರು ಮತ್ತು ವಿದ್ಯಾರ್ಥಿಗಳ ವಿವೇಚನೆಗೆ ಬಿಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಹಾಜರಾತಿ ಕಡ್ಡಾಯ ಅಲ್ಲ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.

ಹೀಗಾಗಿ ಖಾಸಗಿ ಅನುದಾನ ರಹಿತ ಶಾಲೆಗಳ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಖಾಸಗಿ ಶಾಲೆಗಳಿಗೆ ಆರ್ಟಿಇ ಶುಲ್ಕ ಮತ್ತು ಎಸೆಸೆಲ್ಸಿ ಪರೀಕ್ಷೆಗೆ ವಿದ್ಯಾರ್ಥಿಗಳಿಗೆ ಹಾಜರಾತಿಗೆ ಇದ್ದ ಹಾಜರಾತಿ ಮತ್ತು ದಾಖಲಾತಿ ಕುರಿತಾದ ನಿಯಮಗಳಲ್ಲಿ ಸಡಿಲಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]