Friday, April 16 , 2021
ಶೈಕ್ಷಣಿಕ ನೀತಿ ಸಂಬಂಧ ಮಹಾರಾಷ್ಟ್ರ ರೀತಿಯಲ್ಲೇ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಬೆಂಗಳೂರು (08.04.2021) : ಮಹಾರಾಷ್ಟ್ರದಲ್ಲಿ ಕೊರೊನಾದ ಎರಡನೇ ಬಾರಿ ಆತಂಕ ಉಂಟು ಮಾಡಿದ ಕಾರಣ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿದೆ.ಅದೇ ರೀತಿ ಕರ್ನಾಟಕದಲ್ಲೂ ಈ ನಿಯಮ ಜಾರಿಗೆ ತರಲು ಸರ್ಕಾರ ಮುಂದಾಗಿದೆ.

10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಅದೇ ರೀತಿಯಲ್ಲಿ ರಾಜ್ಯದಲ್ಲಿಯೂ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡಬೇಕೆಂಬ ಕುರಿತು ಚರ್ಚೆ ನಡೆದಿದೆ. ಈ ಸಂಬಂಧ ಇಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಕುರಿತು ಮಹತ್ವದ ತೀರ್ಮಾನ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಈ ಸಂಬಂಧ ಮಾತನಾಡಿದ ಸಚಿವ ಸುರೇಶ್ ಕುಮಾರ್ , ಪಿಯುಸಿ ಮತ್ತು ಎಸ್‌ಎಸ್‌ಎಲ್ಸಿ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಭೆ ನಡೆಸಲಾಗಿದ್ದು, ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಪೋಷಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಏಪ್ರಿಲ್ 8 ರಂದು 1 ರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ವಿಚಾರವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]