Friday, March 5 , 2021
ಕಾಲೇಜು ಶುಲ್ಕ ಕಟ್ಟಲು ದಿನಗೂಲಿ ಕೆಲಸ ಮಾಡುತ್ತಿರುವ ಎಂಜಿನಿಯರಿಂಗ್ ವಿದ್ಯಾರ್ಥಿನಿ!

ಪುರಿ (ಒಡಿಶಾ) (28-01-2021): ಪುರಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ರೋಸಿ ಬೆಹೆರಾ (20) ತನ್ನ ಕಾಲೇಜು ಶುಲ್ಕವನ್ನು ಪಾವತಿಸಲು ಕಳೆದ ಮೂರು ವಾರಗಳಿಂದ ಕೂಲಿ ಕಾರ್ಮಿಕಯಾಗಿ ಕೆಲಸ ಮಾಡುತ್ತಿದ್ದಾಳೆ.

ಆಕೆ ತನ್ನ ಮನೆಯ ಸಮೀಪವಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ಎಂಜಿಎನ್‌ಆರ್‌ಇಜಿಎಸ್) ರಸ್ತೆ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದು, ತನ್ನ ಕಾಲೇಜಿನಲ್ಲಿ  ಬಾಕಿ ಇರುವ 24,500 ರೂ. ಶುಲ್ಕ ಪಾವತಿಸಿ ತನ್ನ ಡಿಪ್ಲೊಮಾ ಪ್ರಮಾಣಪತ್ರ ಪಡೆಯಬೇಕಿದೆ.

ಸಿವಿಲ್ ಎಂಜಿನಿಯರಿಂಗ್‌ನಲ್ಲಿ ನನ್ನ ಡಿಪ್ಲೊಮಾವನ್ನು 2019ರಲ್ಲಿ ಪೂರ್ಣಗೊಳಿಸಿದ ನಂತರ, ನನ್ನ ಸ್ನಾತಕೋತ್ತರ ಪದವಿಗಾಗಿ ಹಣವನ್ನು ವ್ಯವಸ್ಥೆ ಮಾಡಲು ನನಗೆ ಸಾಧ್ಯವಾಗುತ್ತಿಲ್ಲ. ನಾನು ಡಿಪ್ಲೊಮಾ ಕಾಲೇಜಿಗೆ ಬಾಕಿ ಉಳಿದಿರುವ 24,500 ರೂ. ಶುಲ್ಕ ಕಟ್ಟಬೇಕಿದೆ ಎಂದಳು.

ಒಡಿಶಾದ ಪುರಿ ಜಿಲ್ಲೆಯ ಚೈನ್‌ಪುರ ಪಂಚಾಯತ್‌ನ ವ್ಯಾಪ್ತಿಯ ಗೋರಡಿಪಿಧಾ ಗ್ರಾಮದ ನಿವಾಸಿ, ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೆಲಸಕ್ಕೆ ಸೇರಿ ನಿತ್ಯ ಕಲ್ಲು- ಮಣ್ಣು ಹೊರುತ್ತಿದ್ದಾಳೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]