Friday, December 4 , 2020
ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​: ಅಪ್ರೆಂಟಿಸ್ ತರಬೇತಿಯ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು (06.11.2020): ಕರ್ನಾಟಕದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಎಸ್​ಸಿ ಎಸ್​ಟಿ ಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಉದ್ದೇಶದಿಂದ ಅವರನ್ನು ಪ್ರೊತ್ಸಾಹಿಸಲು ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಎಂದಿನಂತೆ ಈ ವರ್ಷವೂ ನಡೆಸಲಿದೆ.

2020-21 ನೇ ಸಾಲಿನಲ್ಲಿ ಇಲಾಖೆಯ ಜಿಲ್ಲಾ ಕಚೇರಿಗಳಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಇಬ್ಬರು ಅಭ್ಯರ್ಥಿಗಳನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ಅಪ್ರೆಂಟಿಸ್‍ಗೆ ಮಾಹೆಯಾನ ರೂ. 15ಸಾವಿರ ಗಳ ಸ್ಟೈಫಂಡ್ ನೀಡಲಾಗುತ್ತದೆ.

ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಕನ್ನಡ ಭಾಷಾ ಬಳಕೆ ಬಗ್ಗೆ ಪರೀಕ್ಷಿಸಲಾಗುವುದು. ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 40 ವರ್ಷದೊಳಗಿರಬೇಕು.
ಅರ್ಜಿಯೊಂದಿಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಲು ನವೆಂಬರ್ 10 ರ ವರೆಗೆ ಅವಧಿ ವಿಸ್ತರಿಸಲಾಗಿದೆ.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಧಿಕಾರಿ ಕಚೇರಿ ಆವರಣ ಧಾರವಾಡ ಕಚೇರಿಗೆ ಅಥವಾ ಕಚೇರಿಯ ದೂ:0836-2447469 ಅಥವಾ ಮೊ.ಸಂ.9480841236 ಸಂಪರ್ಕಿಸಬಹುದು

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]