Monday, March 8 , 2021
ಹಲ್ವಾ ಹಂಚಿ ಬಜೆಟ್ ಪ್ರತಿ ಮುದ್ರಣಕ್ಕೆ ಚಾಲನೆ ನೀಡಿದ ನಿರ್ಮಲಾ; ಏನಿದರ ವಿಶೇಷತೆ?

ನವದೆಹಲಿ (23-01-2021): ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2021-22ನೇ ಸಾಲಿನ ಕೇಂದ್ರ ಬಜೆಟ್‌ನ ದಾಖಲೆಗಳನ್ನು ಮುದ್ರಿಸುವ ಪ್ರಕ್ರಿಯೆಯ ‘ಹಲ್ವಾ ಕಾರ್ಯಕ್ರಮ’ಕ್ಕೆ ಚಾಲನೆ ನೀಡಿದರು.

ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೂರನೇ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಸಲಿದ್ದಾರೆ. ಬಜೆಟ್‌ ದಾಖಲಾತಿಗಳ ಮುದ್ರಣದ ಆರಂಭವನ್ನು ಸಾಂಕೇತಿಕವಾಗಿ ಬಿಂಬಿಸುವ ‘ಹಲ್ವಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೆರೆದಿದ್ದ ಹಣಕಾಸು ಸಚಿವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಹಲ್ವಾ ಹಂಚಿದರು.


ಈ ವೇಳೆ, ಹಣಕಾಸು ಖಾತೆಯ ಸಹಾಯಕ ಸಚಿವ ಅನುರಾಗ್‌ ಠಾಕೂರ್‌, ಸಿಬಿಡಿಟಿ, ಸಿಬಿಐಸಿ ಸೇರಿದಂತೆ ಇಲಾಖೆಗಳ ಇತರ ಅಧಿಕಾರಿಗಳು ಪಾಲ್ಗೊಂಡಿದ್ದರು. ಪ್ರತಿ ವರ್ಷ ಸಾಂಪ್ರದಾಯಿಕವಾಗಿ ದೊಡ್ಡ ಕಡಾಯಿಯೊಂದರಲ್ಲಿ ಸಿಹಿ ಹಲ್ವಾ ತಯಾರಿಸಿ ಹಣಕಾಸು ಸಚಿವಾಲಯದ ಸಿಬ್ಬಂದಿಗೆ ವಿತರಿಸಿಕೊಂಡು ಬರಲಾಗುತ್ತಿದೆ.

ಸಿಹಿ ವಿತರಣೆಯ ಬಳಿಕ ಬಜೆಟ್‌ ಪ್ರಕ್ರಿಯೆಯಲ್ಲಿ ನೇರವಾಗಿ ತೊಡಗಿಸಿಕೊಳ್ಳುವ ಹಾಗೂ ಸಹಕರಿಸುವ ಸಿಬ್ಬಂದಿ ಲೋಕಸಭೆಯಲ್ಲಿ ಬಜೆಟ್‌ ಮಂಡನೆಯಾಗುವ ತನಕ ಹಣಕಾಸು ಸಚಿವಾಲಯದಲ್ಲಿಯೇ ಉಳಿದುಕೊಳ್ಳಬೇಕಾಗುತ್ತದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]