Sunday, September 19 , 2021
ಜೈಲಿನಲ್ಲಿ ಅಗ್ನಿ ಅವಘಡ: 41 ಮಂದಿ ಕೈದಿಗಳ ಸಾವು

ಜಕಾರ್ತಾ(08.09.2021): ಇಂಡೋನೇಷ್ಯಾದ ಬಾಂಟೆನ್ ಪ್ರಾಂತ್ಯದ ಜೈಲಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 41 ಜನರು ಮೃತಪಟ್ಟಿದ್ದು, 39 ಜನರು ಗಾಯಗೊಂಡಿದ್ದಾರೆ.

ಈ ಅವಘಡಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ಕೈಗೊಳ್ಳಲಾಗಿದೆ. ಬುಧವಾರ ಮಧ್ಯರಾತ್ರಿ 1 ರಿಂದ 2 ಗಂಟೆ ವೇಳೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಧಿಕಾರಿಗಳು ಕಾರಾಗೃಹದಲ್ಲಿದ್ದವರನ್ನು ಸ್ಥಳಾಂತರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೂಲಗಳ ಪ್ರಕಾರ ಈ ಬ್ಲಾಕ್ ನಲ್ಲಿ ಮಾದಕದ್ರವ್ಯ-ಸಂಬಂಧಿತ ಅಪರಾಧಿಗಳನ್ನು ಇರಿಸಲಾಗಿದೆ. ಇಲ್ಲಿ ಸುಮಾರು 122 ಜನರನ್ನು ಇರಿಸಲಾಗಿತ್ತು ಎನ್ನಲಾಗಿದೆ. ಈ ಜೈಲಿಗೆ 600 ಮಂದಿಯನ್ನು ಇರಿಸುವ ಸಾಮರ್ಥ್ಯವಿದ್ದು, ಇಲ್ಲಿ 2000 ಮಂದಿಯನ್ನು ಇರಿಸಲಾಗಿತ್ತು ಎಂದು ತಿಳಿದುಬಂದಿದೆ.

ಇನ್ನು ಮತ್ತೊಂದು ಮೂಲದ ಪ್ರಕಾರ ಜೈಲಿನ ಅವ್ಯವಸ್ಥೆಯಿಂದ ರೊಚ್ಚಿಗೆದ್ದಿದ್ದ ಕೈದಿಗಳೇ ಜೈಲಿಗೆ ಬೆಂಕಿ ಹಾಕಿದ್ದಾರೆ ಎನ್ನಲಾಗಿದೆ. ಅಲ್ಲದೆ ಬೆಂಕಿ ಅವಘಡ ವೇಳೆ ಹಲವು ಕೈದಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗ್ತಿದೆ. ಎಲೆಕ್ಟ್ರಿಕ್ ಶಾಕ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿರಬಹುದು ಎಂದು ಕೂಡ ಅಂದಾಜಿಸಲಾಗಿದೆ. ಕೆಲವು ಗಂಟೆಗಳ ನಂತರ ಬೆಂಕಿಯನ್ನು ನಂದಿಸಲಾಗಿದೆ ಮತ್ತು ಎಲ್ಲಾ ಸಂತ್ರಸ್ತರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]