Wednesday, June 23 , 2021
ಯುದ್ಧ ನೌಕೆ ಐಎನ್ ಎಸ್ ವಿಕ್ರಮಾಧಿತ್ಯದಲ್ಲಿ ಅಗ್ನಿ

ಕಾರವಾರ (08.05.2021) : ಯುದ್ಧ ವಿಮಾನ ವಾಹಕ ಐಎನ್‌ಎಸ್ ವಿಕ್ರಮಾದಿತ್ಯದಲ್ಲಿ ಇಂದು ಮುಂಜಾನೆ ಅಗ್ನಿ ಆಕಸ್ಮಿಕ ಸಂಭವಿಸಿದೆ.

ಕಾರವಾರ ಬಂದರಿನಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಹಡಗಿನ ಒಂದು ಭಾಗದಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ಕರ್ತವ್ಯದಲ್ಲಿರುವ ಸಿಬ್ಬಂದಿ ಗಮನಿಸಿ ಕೂಡಲೇ ನಂದಿಸಲು ಕಾರ್ಯ ನಿರ್ವಹಿಸಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ ಎಂದು ಭಾರತೀಯ ನೌಕಾಪಡೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಮಾಂಡರ್ ಮೆಹುಲ್ ಕಾರ್ಣಿಕ್ ಮಾಹಿತಿ ನೀಡಿದ್ದಾರೆ.

ಹಡಗಿನಲ್ಲಿ ಸಿಬ್ಬಂದಿಯನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಅಗ್ನಿ ಆಕಸ್ಮಿಕಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಕಾರ್ಣಿಕ್ ಸ್ಪಷ್ಟಪಡಿಸಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]