Sunday, May 9 , 2021
ಅಂಬೇಡ್ಕರ್ ಫ್ಲೆಕ್ಸ್ ಗೆ ಬೆಂಕಿ: ನಾಲ್ವರು ಕಿಡಿಗೇಡಿಗಳು ಪೊಲೀಸ್​ ವಶಕ್ಕೆ

ಮೈಸೂರು (15.04.2021) : ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಳತೂರು ಗ್ರಾಮದಲ್ಲಿ ಅಂಬೇಡ್ಕರ್​ ಫ್ಲೆಕ್ಸ್ ಗೆ ಬೆಂಕಿ ಹಾಕಿದ ಆರೋಪದ ಹಿನ್ನೆಲೆ ನಾಲ್ವರು ಕಿಡಿಗೇಡಿಗಳನ್ನು ವಶಕ್ಕೆ ಪಡೆಯಲಾಗಿದೆ.

ಮಹಾನಾಯಕ ಅಂಬೇಡ್ಕರ್ ಧಾರಾವಾಹಿ ಫ್ಲೆಕ್ಸ್ ಅನ್ನು ಗ್ರಾಮದಲ್ಲಿ ಹಾಕಲಾಗಿದ್ದು, ಮಂಗಳವಾರ ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಗ್ರಾಮದ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಅಂಬೇಡ್ಕರ್ ಜಯಂತಿ ಹಿನ್ನೆಲೆ ಕಾರ್ಯಕ್ರಮ ಆಚರಿಸಲು ತಯಾರಿ ಮಾಡಿಕೊಂಡಿದ್ದರು. ಬುಧವಾರ ಬೆಳಗಿನ ಜಾವ ಈ ಪ್ಲೆಕ್ಸ್​ಗೆ ಬೆಂಕಿ ಹಾಕಿರುವುದು ಗೊತ್ತಾಗಿದೆ.

ಪಟ್ಟಣದ ಪೊಲೀಸ್ ಠಾಣೆಗೆ ಸಂಘದ ಪದಾಧಿಕಾರಿಗಳು ಈ ಸಂಬಂಧ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]