Monday, March 8 , 2021
ರಸ್ತೆಯಲ್ಲಿ ಒಕ್ಕಣೆ: ಬೆಂಕಿಹೊತ್ತಿಕೊಂಡು ಸುಟ್ಟು ಕರಕಲಾದ ಕಾರ್​

ಮಂಡ್ಯ (23.1.2021) : ಪ್ರತಿವರ್ಷವೂ ಕೂಡ ಎಷ್ಟೇ ಅನಾಹುತಗಳಾದರೂ ಲೆಕ್ಕಿಸದೆ ರೈತರು ರಸ್ತೆಯಲ್ಲಿ ಒಕ್ಕಣೆ ಮಾಡಿಕೊಂಡು ಬರುತ್ತಿದ್ದಾರೆ. ಕಳೆದ ವರ್ಷಕೂಡ ಅಲ್ಲಲ್ಲಿ ಅನಾಹುತ ಸಂಭವಿಸಿತ್ತು. ಈ ಬಾರಿಯೂ ಕೂಡ ಅನಾಹುತಕ್ಕೆ ಈ ಒಕ್ಕಣೆಗಳು ಕಾರಣವಾಗಿವೆ.

ಒಕ್ಕಣೆ ಮಾಡಲು ಹಾಕಿದ್ದ ಹುರುಳಿಕಾಳು ಸಿಪ್ಪೆ ಕಾರಿನ ಚಕ್ರಕ್ಕೆ ಸಿಲುಕಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಘಟನೆ ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿ ಭೂವರಹನಾಥಸ್ವಾಮಿ ದೇಗುಲದ ಬಳಿ ಜರುಗಿದೆ.

ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ನಿವಾಸಿ ರಾಜಗೋಪಾಲ್ ಕುಟುಂಬದವರು ಶನಿವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಕಾರಿನಲ್ಲಿ ತಾಲೂಕಿನ ಪುರಾಣ ಪ್ರಸಿದ್ಧ ಭೂವರಹನಾಥ ಸ್ವಾಮಿಯ ದೇಗುಲ ವೀಕ್ಷಣೆಗೆ ಬರುತ್ತಿದ್ದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]