Friday, December 4 , 2020
ಬಲವಂತವಾಗಿ ಗರ್ಭಪಾತ ಮಾಡಿಸಿದ ಪತಿ: ಮಗುವಿನ ಜೊತೆ ತಾಯಿಯ ಸಾವು

ಚಿಕ್ಕಬಳ್ಳಾಪುರ (21.11.2020): ಹೆಂಡತಿಯ ಹೊಟ್ಟೆಯಲ್ಲಿ ಇರುವುದು ಹೆಣ್ಣು ಭ್ರೂಣ ಎಂದು ತಿಳಿದ ಪತಿ ಬಲವಂತವಾಗಿ ಮನೆಯಲ್ಲೇ ಅಬಾರ್ಷನ್​​ ಮಾಡಿಸಿದ ಪರಿಣಾಮ, ಮಗುವಿನ ಜೊತೆ ತಾಯಿಯೂ ಮೃತಪಟ್ಟಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಕೊತ್ತಪಲ್ಲಿ ಗ್ರಾಮದಲ್ಲಿ ನಡೆದಿದೆ.

ಕೊತ್ತಪಲ್ಲಿ ಗ್ರಾಮದ ಸೋಮಶೇಖರ್​ ತನ್ನ ಪತ್ನಿಯಾದ ಪಿ.ಎಸ್​. ಶ್ರೀಕನ್ಯಾಗೆ ಗರ್ಭಪಾತ ಮಾಡಿಸಿದ್ದಾನೆ. ಈ ದಂಪತಿಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳು ಇದ್ದು,ಗಂಡು ಮಗು ಬೇಕು ಎಂಬ ಕಾರಣಕ್ಕೆ 3ನೇ ಮಗು ಪಡೆಯಲು ದಂಪತಿ ನಿರ್ಧರಿಸಿದ್ದರು. ಗರ್ಭಪಾತ ಮಾಡಿಸಿಕೊಳ್ಳಲು ಶ್ರೀಕನ್ಯಾ ಒಪ್ಪಿರಲಿಲ್ಲ. ಆದ್ರೂ ನ.16ರಂದು ಮನೆಯಲ್ಲೇ ಬಲವಂತವಾಗಿ ಗರ್ಭಪಾತ ಮಾಡಿಸಿದ್ದರು ಎನ್ನಲಾಗಿದೆ.

ಈ ವೇಳೆ ಶ್ರೀಕನ್ಯಾಗೆ ತೀವ್ರ ರಕ್ತಸ್ರಾವವಾಗಿದ್ದು, ಪಟ್ಟಣದ ಖಾಸಗಿ ಕ್ಲಿನಿಕ್​ಗೆ ದಾಖಲಿಸಲಾಗಿತ್ತು. ವೈದ್ಯರ ಸೂಚನೆ ಮೇರೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಚಿಕಿತ್ಸೆ ಫಲಿಸಲದೆ ನ.19ರಂದು ಮೃತಪಟ್ಟಿದ್ದಾಳೆ. ಬಲವಂತವಾಗಿ ಗರ್ಭಪಾತ ಮಾಡಿಸಿದ ಹಿನ್ನೆಲೆ ಮಗಳು ಮೃತಪಟ್ಟಿದ್ದಾಳೆ ಎಂದು ಮೃತಳ ತಂದೆ ಶ್ರೀನಿವಾಸ್​ ಬಾಗೇಪಲ್ಲಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]