Sunday, May 9 , 2021
ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ ನಿಧನ

ನವದೆಹಲಿ (16.04.2021) : ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ(68) ಇಂದು ನಿಧನರಾಗಿದ್ದಾರೆ.

1974ನೇ ಬ್ಯಾಚ್‌ ಬಿಹಾರ ಕೇಡರ್‌ನ ಐಪಿಎಸ್‌ ಅಧಿಕಾರಿ (ನಿವೃತ್ತ) ಸಿನ್ಹಾ ಹಲವು ಪ್ರಮುಖ ಸ್ಥಾನಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.

ಕೋವಿಡ್‌-19 ಸಂಬಂಧಿಸಿದ ಕಾರಣಗಳಿಂದಾಗಿ ಸಾವು ಸಂಭವಿಸಿರಬಹುದೆಂದು ತಿಳಿದುಬಂದಿದೆ. ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಗುರುವಾರ ರಾತ್ರಿ ದೃಢಪಟ್ಟಿತ್ತು.

2012ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗುವುದಕ್ಕೂ ಮುನ್ನ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ಮುಖ್ಯಸ್ಥರಾಗಿ, ಸಿಬಿಐನ ಪಾಟ್ನಾ ಮತ್ತು ದೆಹಲಿಯಲ್ಲಿ ಹಲವು ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.

 

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]