Monday, July 26 , 2021
ಬ್ರೇಕಿಂಗ್ ನ್ಯೂಸ್: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನ ಪ್ರಯಾಣ ಉಚಿತ | ಪಾಸ್ ಪಡೆಯಲು ಹೀಗೆ ಮಾಡಿ

ಬೆಂಗಳೂರು (14-07-2021): ರಾಜ್ಯದಲ್ಲಿ ಪಿಯುಸಿ ಪರೀಕ್ಷೆ ರದ್ದಾಗಿದ್ದರೂ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದೆ. ಉಚ್ಛ ನ್ಯಾಯಲಯ ಕೂಡಾ ಪರೀಕ್ಷೆ ನಡೆಸುವಂತೆ ಅನುಮತಿ ನೀಡಿದೆ. ಹಾಗಾಗಿ ಇದೇ ತಿಂಗಳು 19 ಮತ್ತು 22 ರಂದು ಎರಡು ದಿನ ಪರೀಕ್ಷೆ ನಡೆಯುತ್ತಿದೆ. ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವಂತೆ ಕೆ ಎಸ್ ಆರ್ ಟಿ ಸಿ ಮತ್ತು ಬಿ ಎಂ ಟಿ ಸಿ ಬಸ್ಸುಗಳಲ್ಲಿ ಉಚಿತ ಪ್ರಯಾಣ ನೀಡುವದಾಗಿ ಆದೇಶಿಸಿವೆ.

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೂ ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಪ್ರಯಾಣಿಸಲು ಉಚಿತ ಪ್ರಯಾಣಕ್ಕೆ ಅನುಮತಿ ನೀಡಿದ್ದು, ಬಿಎಂಟಿಸಿ ಯ ಎಲ್ಲಾ ಬಸ್ಸುಗಳು ಹಾಗೂ ಕೆ ಎಸ್ ಆರ್ ಟಿ ಸಿ ಯ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಇದಕ್ಕಾಗಿ ಮಾಡಬೇಕಾದುದು ಇಷ್ಟೆ: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು ಈ ಮೇಲ್ಕಂಡ ಬಸ್ಸುಗಳ ನಿರ್ವಾಹಕರ ಬಳಿ ತಮ್ಮ ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿ ಪ್ರಯಾಣಿಸಬಹುದಾಗಿದೆ ಎಂದು ಕೆ ಎಸ್ ಆರ್ ಟಿ ಸಿ ಮತ್ತು ಬಿ ಎಂ ಟಿ ಸಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿವೆ.

CLICK HERE!

BMTC KSRTC free pass for sslc exam

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]