Wednesday, June 23 , 2021
ಕರ್ನಾಟಕಕ್ಕೆ 1,200 ಮೆ. ಟನ್‌ ಆಮ್ಲಜನಕ ಕೊಡಿ: ಕೇಂದ್ರಕ್ಕೆ ಛೀಮಾರಿ ಹಾಕಿದ ಸುಪ್ರೀಂ

ನವದೆಹಲಿ (08.05.2021) : ಕರ್ನಾಟಕಕ್ಕೆ ಪ್ರತೀ ದಿನದ ಆಮ್ಲಜನಕ ಹಂಚಿಕೆಯನ್ನು 965 ಮೆ. ಟನ್‌ಗಳಿಂದ 1,200 ಮೆ. ಟನ್‌ಗಳಿಗೆ ಹೆಚ್ಚಿಸುವಂತೆ ಕರ್ನಾಟಕ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ನೀಡಿದ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಈ ಮೂಲಕ ಇದನ್ನು ಪ್ರಶ್ನಿಸಿದ್ದ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾದಂತಾಗಿದೆ.

ಕರ್ನಾಟಕದ ಜನತೆಯನ್ನು ಸಂಕಷ್ಟಕ್ಕೆ ದೂಡಲು ನಾವು ಸಿದ್ಧರಿಲ್ಲ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಜಾ ಮಾಡಿದೆ. ಇದರಿಂದಾಗಿ ರಾಜ್ಯದ ಜನತೆ ಎದುರಿಸುತ್ತಿದ್ದ ಆಮ್ಲಜನಕ ಸಮಸ್ಯೆ ಬಹುತೇಕ ನಿವಾರಣೆಯಾಗುವ ಸಾಧ್ಯತೆ ಇದೆ.

ಮುಂದಿನ ಒಂದು ವಾರಕ್ಕೆ ಎಷ್ಟು ಆಮ್ಲಜನಕ ಅಗತ್ಯ ಎಂಬ ವಿವರವನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಬೇಕು. ಇದನ್ನು ಕೇಂದ್ರವು ನಾಲ್ಕು ದಿನಗಳ ಒಳಗೆ ಪರಿಗಣಿಸಬೇಕು ಎಂದು ಆದೇಶ ನೀಡಲಾಗಿದೆ. ಅಲ್ಲಿವರೆಗೆ ಈಗಿನಿಂದಲೇ ಕೇಂದ್ರವು ದಿನಕ್ಕೆ 1,200 ಮೆ. ಟನ್‌ ಆಮ್ಲಜನಕವನ್ನು ಕರ್ನಾಟಕಕ್ಕೆ ಒದಗಿಸಬೇಕು ಎಂದು ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌ ಮತ್ತು ಎಂ.ಆರ್‌. ಶಾ ಅವರಿದ್ದ ನ್ಯಾಯಪೀಠ ಕೇಂದ್ರಕ್ಕೆ ಸೂಚಿಸಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]