Sunday, September 19 , 2021
ರಾಜ್ಯದಲ್ಲಿ ನಾಳೆಯಿಂದ ಪದವಿ ಕಾಲೇಜುಗಳು ಆರಂಭ

ಬೆಂಗಳೂರು  (25.07.2021)   : ರಾಜ್ಯದಲ್ಲಿ ನಾಳೆಯಿಂದ ಪದವಿ ಕಾಲೇಜುಗಳಲ್ಲಿ ಭೌತಿಕ ತರಗತಿಗಳು ಪುನಾರಂಭವಾಗಲಿವೆ.  ಕಾಲೇಜಿಗೆ ಆಗಮಿಸುವ ವಿದ್ಯಾರ್ಥಿಗಳು ಕನಿಷ್ಠ 1 ಡೋಸ್ ಲಸಿಕೆ (1 dose vaccine) ಪಡೆದಿರಬೇಕು ಎಂಬ ನಿಯಮದೊಂದಿಗೆ ಕಾಲೇಜು ಆರಂಭಿಸಲಾಗುತ್ತಿದೆ.

ಉನ್ನತ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಶೇಕಡ.75 ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿರುವುದರಿಂದ 26 ರಿಂದಲೇ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸರ್ಕಾರದ ಸೂಚನೆಯಂತೆ ಸೋಮವಾರದಿಂದ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯದ 24 ಸರ್ಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳು, 17 ಡೀಮ್ಸ್ ವಿವಿಗಳು, ಇತರೆ ಖಾಸಗಿ ವಿವಿಗಳು ಮತ್ತು ಅವುಗಳ ಸಂಯೋಜಿತ 415 ಸರ್ಕಾರಿ ಪದವಿ ಕಾಲೇಜು, 1800 ಖಾಸಗಿ ಪದವಿ ಕಾಲೇಜು, 339 ಅನುದಾನಿತ ಪದವಿ ಕಾಲೇಜು , ಎಂಜಿನಿಯರಿಂಗ್ ಕಾಲೇಜು, ಡಿಪ್ಲೋಮಾ ಕಾಲೇಜುಗಳಲ್ಲಿ ಎಲ್ಲ ಕೊಠಡಿ,ಕಚೇರಿಗಳಲ್ಲಿ ಸ್ವಚ್ಛತೆ, ಸ್ಯಾನಿಟೈಸಿಂಗ್ ಸೇರಿದಂತೆ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಅನುಸಾರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]