Sunday, September 19 , 2021
ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್ನಿಂದ ಗ್ರೀನ್ ಸಿಗ್ನಲ್

ಬೆಂಗಳೂರು (12.07.2021): ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್ ಹಸಿರು  ನಿಶಾನೆ ತೋರಿದೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಕೋರಿ ಸಿಂಗ್ರಿಗೌಡ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

ಕೋವಿಡ್ ಸೋಂಕು ಕಡಿಮೆ ಇರುವುದರಿಂದ ಪರೀಕ್ಷೆ ಸೂಕ್ತ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೊರ್ಡ್ ಪರೀಕ್ಷೆ ಬರೆಯಬೇಕು. ಅವರ ಭವಿಷ್ಯದ ಆಯ್ಕೆ ದೃಷ್ಟಿಯಿಂದ ಪರೀಕ್ಷೆ ಅಗತ್ಯವಾಗಿದೆ ಎಂದು ಪೀಠ ಹೇಳಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಿಬಿಎಸ್‍ಇ ಮಾದರಿಯಲ್ಲಿ ರದ್ದು ಮಾಡಬೇಕೆಂದು ಸಿಂಗ್ರಿಗೌಡ ಎಂಬುವವರು ಮನವಿ ಮಾಡಿದ್ದರು. ಅರ್ಜಿದಾರರ ಮನವಿಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಿತ್ತು. ಎರಡು ದಿನಗಳ ಕಾಲ ಮಾತ್ರ ಪರೀಕ್ಷೆ ನಡೆಯಲಿದೆ. ತಲಾ ಒಂದು ಗಂಟೆಯ ಪರೀಕ್ಷೆ ಇರುತ್ತದೆ. ಎಲ್ಲರನ್ನೂ ಪಾಸ್ ಮಾಡಲಾಗುವುದು. ಅಂಕಗಳಿಗೆ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಸರ್ಕಾರದ ಪರವಾಗಿ ಹೈಕೋರ್ಟ್‍ಗೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರು ತಮ್ಮ ವಾದ ಮಂಡಿಸಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]