Friday, December 4 , 2020
ಗುಜರಾತ್​ನಲ್ಲಿ ಕೊರೊನಾ 2ನೇ ಅಲೆಯ ರಣಕೇಕೆ: 1.91 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಅಹಮದಾಬಾದ್ (19-11-2020):​ ದೀಪಾವಳಿ ಹಬ್ಬದ ನಂತರ ವ್ಯಾಪಕ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಎರಡನೇ ಕೋವಿಡ್​-19 ಅಲೆಯ ಮಧ್ಯದಲ್ಲಿದ್ದು, ಕಳೆದ 24 ಗಂಟೆಗಳಲ್ಲಿ1,281 ಪ್ರಕರಣಗಳು ವರದಿಯಾಗಿ ಎಂಟು ರೋಗಿಗಳು ಸೋಂಕಿಗೆ ಬಲಿಯಾಗಿದ್ದಾರೆ.

ಈವರೆಗೆ 1,91,642 ಪ್ರಕರಣಗಳು ದಾಖಲಾಗಿದ್ದು, 3,823 ಮಂದಿ ಮೃತಪಟ್ಟಿದ್ದಾರೆ. ಬುಧವಾರದ ಅಂಕಿ ಅಂಶಗಳ ಪ್ರಕಾರ 12,457 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಹಂಚಿಕೊಂಡಿದೆ.

ದಿಢೀರ್ ಏರಿಕೆಯಿಂದ ರಾಜ್ಯಾದ್ಯಂತ ಆಸ್ಪತ್ರೆ ಹಾಸಿಗೆಗಳ ಬೇಡಿಕೆ ಹೆಚ್ಚಿದೆ. ಉಪಮುಖ್ಯಮಥ್ರಿ ಮತ್ತು ಆರೋಗ್ಯ ಸಚಿವ ನಿತಿನ್ ಪಟೇಲ್ ಅವರು ಇತ್ತೀಚೆಗೆ ಆಸ್ಪತ್ರೆಯಲ್ಲಿ ತುರ್ತು ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಿದರು.

ಇದು ಎರಡನೇ ಅಲೆಯಾಗಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ. ಏಕೆಂದರೆ ಸಾರ್ವಜನಿಕರು ಸಾಮಾಜಿಕ ಕಟ್ಟುಪಾಡುಗಳನ್ನು ಪಾಲಿಸುತ್ತಿಲ್ಲ. ಅದಕ್ಕೂ ಮುನ್ನ ಮತ್ತು ವಿಶೇಷವಾಗಿ ದೀಪಾವಳಿ ಹಬ್ಬದ ಸಮಯದಲ್ಲಿ ಶಿಷ್ಟಾಚಾರಗಳನ್ನು ಅನುಸರಿಸಲಿಲ್ಲ ಎಂದು ಸಾಂಕ್ರಾಮಿಕ ರೋಗ ತಜ್ಞವೈದ್ಯರು ತಿಳಿಸಿದ್ದಾರೆ.

ನಗರದಲ್ಲಿ 7,279 ಹಾಸಿಗೆಗಳ ಸಹಿತ ಏಳು ಸರ್ಕಾರಿ ಮತ್ತು 76 ಖಾಸಗಿ ಕೋವಿಡ್​ ನಿಯೋಜಿತ ಆಸ್ಪತ್ರೆಗಳಿವೆ. ಬುಧವಾರದ ವೇಳೆಗೆ ಏಳು ಸರ್ಕಾರಿ ಆಸ್ಪತ್ರೆಗಳಲ್ಲಿ 2,848 ಹಾಸಿಗೆಗಳ ಪೈಕಿ, 2,347 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 501 ಹಾಸಿಗೆಗಳು ಖಾಲಿ ಇವೆ. ಒಟ್ಟು ಹಾಸಿಗೆಗಳಲ್ಲಿ ಶೇ 40ರಷ್ಟು ಹಾಸಿಗೆಗಳು ಲಭ್ಯವಾಗಿವೆ ಎಂದು ಹೇಳಿದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]