Monday, July 26 , 2021
ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಗೌರವ | ನಟಿ ಹರಿಪ್ರಿಯಾಗೆ ಅಂತಾರಾಷ್ಟ್ರೀಯ ಪ್ರಶಸ್ತಿ
haripriya amruthamathi 2020

ರಾಷ್ಟ್ರಧ್ವನಿ ಸಿನಿಡೆಸ್ಕ್: ಕನ್ನಡ ಚಿತ್ರರಂಗವು ಇತ್ತೀಚಿನ ದಿನಗಳಲ್ಲಿ ಜಾಗತಿಕ ಸಿನಿರಂಗದಲ್ಲಿ ಹೊಸ ಮೈಲುಗಲ್ಲುಗಳನ್ನು ಸ್ಥಾಪಿಸುತ್ತಾ ಮುನ್ನಗ್ಗುತ್ತಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸುತ್ತಿದೆ. ಅಂತೆಯೇ ನಟಿ ಹರಿಪ್ರಿಯಾ ಅಂತಾರಾಷ್ಟ್ರೀಯ ಪ್ರಶಸ್ತಿಯೊಂದಕ್ಕೆ ಭಾಜನರಾಗಿದ್ದಾರೆ. ಆ ಮೂಲಕ ಕನ್ನಡ ಚಿತ್ರರಂಗಕ್ಕೆ ಗರಿಮೆ ತಂದುಕೊಟ್ಟಿದ್ದಾರೆ.

ವೈವಿದ್ಯಮಯ ಚಿತ್ರಗಳಲ್ಲಿ ನಟಿಸಿರುವ ಹರಿಪ್ರಿಯಾ ತನ್ನ ಮೊದಲ ಸಿನಿಯಾನದಲ್ಲಿ ಅಷ್ಟೇನೂ ಗಮನಾರ್ಹ ಸಾಧನೆಮಾಡದಿದ್ದರೂ ಸಹ, ಸುದೀಪ್ ಅಭಿನಯದ ರನ್ನ ಚಲನಚಿತ್ರದ ಮೂಲಕ ಆರಂಭವಾದ ಎರಡನೇ ಇನಿಂಗ್ಸ್ ನಲ್ಲಿ ಒಂದರ ಮೇಲೊಂದರಂತೆ ಅತ್ಯುತ್ತಮ ಚಿತ್ರಗಳನ್ನು ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ಅಂತಾರಾಷ್ಟ್ರೀಯ ಪ್ರಶಸ್ತಿಗಳು ಇವರನ್ನುಹುಡುಕಿಕೊಂಡು ಬರುತ್ತಿವೆ. 2020 ರಲ್ಲಿ ನೋಯ್ಡಾದ ಎರಡು ಪ್ರತ್ಯೇಕ ಸಂಸ್ಥೆಗಳು ನಡೆಸಿದ ನೋಯ್ಡಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಶ್ರೇಷ್ಠ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. ಈಗ 2021 ರಲ್ಲಿ ಹಾಲಿವುಡ್ ಅಂತಾರಾಷ್ಟ್ರೀಯ ಗೋಲ್ಡನ್ ಏಜ್ ಚಿತ್ರೋತ್ಸವದಲ್ಲಿ ಮತ್ತೊಮ್ಮೆ ಶ್ರೇಷ್ಠ ನಟಿ ಪ್ರಶಸ್ತಿ ಲಭಿಸಿದ್ದು, ಕನ್ನಡ ಚಿತ್ರರಂಗಕ್ಕೆ ಹೆಮ್ಮೆಯಾಗಿದೆ.

ಖ್ಯಾತ ಸಾಹಿತಿ ಹಾಗೂ ಚಿತ್ರ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶನದ ಅಮೃತಮತಿ ಚಿತ್ರದ ನಟನೆಗಾಗಿ ಈ ಪ್ರಶಸ್ತಿಗಳು ನಟಿ ಹರಿಪ್ರಿಯಾಗೆ ಒಲಿದು ಬಂದಿವೆ. ಅಷ್ಟೇ ಅಲ್ಲದೇ ಇದೇ ಚಲನಚಿತ್ರಕ್ಕೆ ಅಟ್ಲಾಂಟಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಶ್ರೇಷ್ಠ ವಿದೇಶಿ ಭಾಷಾ ಚಿತ್ರ ಪ್ರಶಸ್ತಿ ಗಳಿಸಿದ್ದು, ಲಾಸ್ ಏಂಜಲೀಸ್ ನ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಶ್ರೇಷ್ಠ ಚಿತ್ರ ಮತ್ತು ಶ್ರೇಷ್ಠ ಚಿತ್ರಕಥೆ ಲಭಿಸಿತ್ತು. ಒಟ್ಟಾರೆ ಇದೇ ಅಮೃತಮತಿ ಚಿತ್ರವು ಒಟ್ಟು 05 ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿದಂತಾಗಿದ್ದು, ಕನ್ನಡ ಚಿತ್ರರಂಗಕ್ಕೆ ಅಂತಾರಾಷ್ಟ್ರೀಯ ಚಲನಚಿತ್ರ ರಂಗದಲ್ಲಿ ಅಪಾರ ಗೌರವವನ್ನು ತಂದುಕೊಟ್ಟಿದೆ.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಇನ್ನು ನೆನಪುಗಳಲ್ಲಿ ಮಾತ್ರ ನಿತ್ಯ ಸಂಚಾರಿ.‌‌.‌‌,..
ರಾಷ್ಟ್ರಧ್ವನಿ ಆರಂಭಗೊಂಡು 2019 ರ ಜನವರಿಗೆ ಸರಿಯಾಗಿ ಒಂದು ವರ್ಷ ‌ಆಗಿತ್ತು. ಹೊಸವರ್ಷದ ಸಂಭ್ರಮದಿಂದ...
POLL

[democracy id="1"]