Friday, January 15 , 2021
ಪ್ರತಿಭಟನಾ ನಿರತ ರೈತರಿಗೆ ತಮಗೇನು ಬೇಕೆಂಬುದೇ ತಿಳಿದಿಲ್ಲ: ಹೇಮಾ ಮಾಲಿನಿ

ನವದೆಹಲಿ (13.01.2021) : ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ತಮಗೆ ಏನು ಬೆೇಕೆಂಬುದೇ ತಿಳಿದಿಲ್ಲ. ಯಾರದ್ದೋ ಮಾತು ಕೇಳಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ಸಂಸದೆ ಹಾಗೂ ಬಾಲಿವುಡ್ ಹಿರಿಯ ನಟಿ ಹೇಮಾ ಮಾಲಿನಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೃಷಿ ಕಾಯ್ದೆಗಳನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿರುವುದು ಒಳ್ಳೆಯದು. ಇದು ಪರಿಸ್ಥಿತಿಯನ್ನು ಶಾಂತಗೊಳಿಸಲಿದೆ. ಹಲವು ಸುತ್ತಿನ ಮಾತುಕತೆಯ ಬಳಿಕವೂ ರೈತರು ಒಮ್ಮತಕ್ಕೆ ಬರಲು ಸಿದ್ಧರಿಲ್ಲ. ಅವರಿಗೆ ಏನು ಬೇಕು ಮತ್ತು ಕೃಷಿ ಕಾನೂನುಗಳಲ್ಲಿ ಸಮಸ್ಯೆ ಏನಿದೆ ಎಂಬುದು ಸಹ ತಿಳಿದಿಲ್ಲ. ಇದರರ್ಥ ಯಾರೋ ಹೇಳಿದ್ದರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದಿದ್ದಾರೆ.

ಪಂಜಾಬ್‌ನಲ್ಲಿ ಮೊಬೈಲ್ ಟವರ್‌ಗಳನ್ನು ಧ್ವಂಸಗೊಳಿಸಿರುವ ಬಗ್ಗೆ ಮಾತನಾಡಿದ ಅವರು ಪಂಜಾಬ್‌ ಸಾಕಷ್ಟು ನಷ್ಟ ಅನುಭವಿಸಿದೆ. ರೈತರು ಮೊಬೈಲ್ ಟವರ್‌ಗಳನ್ನು ಧ್ವಂಸಗೊಳಿಸಿರುವುದು ಉತ್ತಮ ಕೆಲಸವಲ್ಲ. ಸರ್ಕಾರವು ಪದೇ ಪದೇ ಮಾತುಕತೆಗೆ ಆಹ್ವಾನಿಸಿದೆ. ಆದರೆ ಅವರಿಗೆ ಯಾವುದೇ ಅಜೆಂಡಾ ಕೂಡಾ ಇಲ್ಲ ಎಂದರು.

Like us on facebook
Disclaimer:

ರಾಷ್ಟ್ರಧ್ವನಿ ಅಂತಾರ್ಜಾಲ ಸುದ್ದಿ ವಾಹಿನಿಯಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಾರ್ವಜನಿಕರು ಆರೋಗ್ಯಕರ ಚರ್ಚೆ, ಕಮೆಂಟ್ ಗಳನ್ನು ಮಾಡಬಹುದಾಗಿದೆ. ಧರ್ಮ, ಜಾತಿ ನಿಂದನೆಯಾಗುವಂತಹ ಮತ್ತು ಸಾಮರಸ್ಯ ಕೆಡಿಸುವಂತಹ ದುರುದ್ದೇಶಪೂರಿತ ಕಮೆಂಟ್ ಹಾಗೂ ಚರ್ಚೆ ಕಾನೂನು ರೀತಿಯಲ್ಲಿ ಅಪರಾಧವಾಗಿರುತ್ತದೆ. ದೇಶದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವಂತಹ ಯಾವುದೇ ಕಮೆಂಟ್ ಗಳನ್ನು ಹಾಕಿದ್ದಲ್ಲಿ, ಅದಕ್ಕೆ ಕಮೆಂಟ್ ಹಾಕುವವರೇ ಹೊಣೆಗಾರರಾಗಿರುತ್ತಾರೆ. ಅಂತಹವರ ಹೆಸರು ಮತ್ತು ಐಪಿ ಅಡ್ರೆಸ್ ಗಳನ್ನು ಸಂಬಂಧಪಟ್ಟ ಇಲಾಖೆಗೆ ಒದಗಿಸಲು ರಾಷ್ಟ್ರಧ್ವನಿ ಬದ್ಧವಾಗಿರುತ್ತದೆ.

ಸಿನಿಮಾ
ಸಂಪಾದಕೀಯ ಮತ್ತಷ್ಟು
ಸಂವಿಧಾನಾತ್ಮಕ ಸದನಗಳಲ್ಲಿ ಪಾಸ್ ಆಗುತ್ತಿದೆ ‘ಹಿಂದೂ..
ದ್ವೇಷಪೂರಿತ, ಅಸಂವಿಧಾನಿಕ ಪೌರತ್ವ ತಿದ್ದುಪಡಿ ಮಸೂದೆ ಉಭಯ ಸದನಗಳಲ್ಲಿ ಅಂಗೀಕಾರವಾಗಿದೆ. ಇನ್ನು ರಾಷ್ಟ್ರಪತಿ ಅಂಕಿತ...
POLL

[democracy id="1"]